​ಆ. 2: ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕಾ ಶಿಬಿರ

Update: 2021-08-01 14:36 GMT

ಮಂಗಳೂರು, ಆ.1: ದ.ಕ. ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕಾ ಶಿಬಿರಗಳು ಆ.2ರಂದು ನಡೆಯಲ್ಲಿದ್ದು, 40 ಸಾವಿರಕ್ಕೂ ಹೆಚ್ಚಿನ ಲಸಿಕೆ ನೀಡುವ ಗುರಿ ಹೊಂದಲಾಗಿದೆ.

18 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಕೋವಿಶೀಲ್ಡ್ ಮೊದಲನೇ ಡೋಸ್ ಲಸಿಕೆಯನ್ನು ನೀಡಲಾಗುವುದು. 45 ವರ್ಷ ಮೇಲ್ಪಟ್ಟವರಿಗೆ ಕೋವಿಶೀಲ್ಡ್ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗುವುದು. ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶೇ.50 ಆನ್‌ಲೈನ್ ನೋಂದಣಿ ಹಾಗೂ ಶೇ. 50 ಸ್ಥಳದಲ್ಲಿಯೇ ನೋಂದಣಿ ಮಾಡಿಕೊಳ್ಳುವ ಮೂಲಕ ನಡೆಯಲಿದೆ.

ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಕೋವ್ಯಾಕ್ಸಿನ್ ಎರಡನೇ ಡೋಸ್ ಮಾತ್ರ ಲಭ್ಯವಿರುತ್ತದೆ. ಎನ್‌ಆರ್‌ಐ ಫಲಾನುಭವಿಗಳಿಗೆ ಕೋವಿಶೀಲ್ಡ್ ಎರಡನೇ ಡೋಸ್ ಲಸಿಕೆ 100 ಮಂದಿಗೆ ಮಾತ್ರ ಲಭ್ಯವಾಗಲಿದೆ ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News