ರಾಜ್ಯದ ಅನುದಾನರಹಿತ ಶಿಕ್ಷಕರು-ಬೋಧಕೇತರ ಸಿಬ್ಬಂದಿಗೆ ಅನುದಾನ ಬಿಡುಗಡೆ

Update: 2021-08-01 15:44 GMT

ಬೆಂಗಳೂರು, ಆ.1: ರಾಜ್ಯದ ಅನುದಾನರಹಿತ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ರಾಜ್ಯ ಸರಕಾರ ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಘೋಷಣೆ ಮಾಡಿದ್ದ ಕೋವಿಡ್-19 ವಿಶೇಷ ಪ್ಯಾಕೇಜ್ ಪರಿಹಾರ ಧನವನ್ನು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ. 

ರಾಜ್ಯ ಸರಕಾರ ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿತ್ತು. ಇದರಿಂದಾಗಿ ರಾಜ್ಯದ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 1,72,945 ಶಿಕ್ಷಕರು ಮತ್ತು 34 ಸಾವಿರ ಬೋಧಕೇತರ ಸಿಬ್ಬಂದಿಗಳಿಗೆ ತಲಾ 5 ಸಾವಿರ ರೂ.ರಂತೆ ಪರಿಹಾರ ಫ್ಯಾಕೇಜ್ ಘೋಷಣೆ ಮಾಡಲಾಗಿದೆ. 

ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ 10,347,25 ಲಕ್ಷಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ದಾಖಲೆ ಸಲ್ಲಿಸಿರುವ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ನೇರವಾಗಿ ಬ್ಯಾಂಕ್ ಖಾತೆಯಲ್ಲಿ ಪರಿಹಾರ ಧನ ಜಮೆಯಾಗಲಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News