ಶಾಲೆ ಆರಂಭಿಸಲು ರುಪ್ಸಾ ಒತ್ತಾಯ

Update: 2021-08-01 16:20 GMT
ಫೈಲ್ ಚಿತ್ರ

ಬೆಂಗಳೂರು, ಆ.1: ಮಕ್ಕಳ ಶೈಕ್ಷಣಿಕ ಪ್ರಗತಿಯ ಹಿತದೃಷ್ಟಿಯಿಂದ ಶಾಲೆಗಳನ್ನು ಈ ಕೂಡಲೇ ಆರಂಭಿಸಲು ರಾಜ್ಯ ಸರಕಾರ ಮುಂದಾಗಬೇಕೆಂದು ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಒತ್ತಾಯಿಸಿದೆ.

ರವಿವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ರಾಜ್ಯಾಧ್ಯಕ್ಷ ಎಸ್.ಎಲ್.ಹಾಲನೂರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಲೆಗಳನ್ನು ಆರಂಂಭಿಸುವ ಕುರಿತು ಮಾತುಕತೆ ನಡೆಸಲು ಆಹ್ವಾನಿಸಿದ್ದು, ಈ ಸಂದರ್ಭದಲ್ಲಿ ಶಾಲೆಗಳನ್ನು ಯಾವುದೇ ವಿಳಂಬ ಮಾಡದೆ ಆರಂಭಿಸುವಂತೆ ಬೇಡಿಕೆ ಸಲ್ಲಿಸಲಾಗುವುದು ಎಂದರು.

ಶಾಲೆಗಳನ್ನು ಆರಂಭಿಸುವಂತೆ ಐಸಿಎಂಆರ್, ರಾಜ್ಯ ಸರಕಾರ ರಚಿಸಿದ್ದ ಕಾರ್ಯಪಡೆ ಮತ್ತು ಆರೋಗ್ಯ ತಜ್ಞ ಡಾ.ದೇವಿಶೆಟ್ಟಿ ನೇತೃತ್ವದ ತಜ್ಞರ ಸಮಿತಿ ಈಗಾಗಲೇ ಹೇಳಿದೆ. ಶಾಲೆ ಆರಂಭಿಸಲು ಜು.30 ಕೊನೆಯ ಗಡುವನ್ನು 10 ದಿನಗಳ ಮೊದಲೇ ಸರಕಾರ ಮತ್ತು ಇಲಾಖೆಯ ಗಮನಕ್ಕೆ ಸಂಘ ನೀಡಿದ್ದರೂ ಯಾವುದೇ ಕ್ರಮವಹಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಅಲ್ಲದೆ, ಸರಕಾರಗಳು, ಖಾಸಗಿ ಶಾಲೆಗಳ ಮೇಲಿನ ಮಲತಾಯಿ ಧೋರಣೆಯನ್ನು ಬಿಡಬೇಕು. ಶಾಲೆಗಳ ಎಲ್ಲ ಸಮಸ್ಯೆಗಳನ್ನು ಬಗೆಹರಿಸಬೇಕು. ಜೊತೆಗೆ, ನಮ್ಮ ಕೆಲವು ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News