ಚಾಮರಾಜನಗರ: ಆ.6ರಿಂದ 9ರ ತನಕ ಮಹದೇಶ್ವರ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

Update: 2021-08-02 10:13 GMT

ಚಾಮರಾಜನಗರ, ಆ.2: ಕೋವಿಡ್ ಮೂರನೇ ಅಲೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಚಾಮರಾಜನಗರ ಜಿಲ್ಲಾಡಳಿತ ಆ.6ರಿಂದ 9ರ ತನಕ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಿದೆ.

ಭೀಮನ ಅಮಾವಾಸೆ ಮತ್ತು ಎಣ್ಣೆಮಜ್ಜನ ನಡೆಸುವ ಸಲುವಾಗಿ ಪ್ರತಿ ಮಹದೇಶ್ವರ ಸನ್ನಿದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಯಿದ್ದು ಹಾಗೂ ಸದ್ಯ ಕೋವಿಡ್ ಮೂರನೇ ಅಲೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅಂತರಾಜ್ಯ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಆದೇಶದಲ್ಲಿ ತಿಳಿಸಿದ್ದಾರೆ.

ಮಹದೇಶ್ವರ ಬೆಟ್ಟದಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ, ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿ ಸ್ಥಳೀಯ ನಿವಾಸಿಗಳನ್ನು ಮತ್ತು ಕರ್ತವ್ಯ ನಿಮಿತ್ತ ಆಗಮಿಸುವ ಜನಪ್ರತಿನಿಧಿಗಳನ್ನು ಹೊರತುಪಡಿಸಿ ಬೇರೆಯವರಿಗೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News