ಕೋವಿಡ್ ಲಾಕ್‍ಡೌನ್-ಮಳೆಯಿಂದ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ಇಮ್ರಾನ್ ಪಾಷ ನೆರವು

Update: 2021-08-02 14:44 GMT

ಬೆಂಗಳೂರು, ಆ.2: ಕೋವಿಡ್ ಲಾಕ್‍ಡೌನ್ ಹಾಗೂ ಇತ್ತೀಚೆಗೆ ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪಾದರಾಯನಪುರ ವಾರ್ಡ್‍ನ ಅರ್ಫಾತ್ ನಗರದಲ್ಲಿ ಸಂಕಷ್ಟಕ್ಕೆ ಒಳಗಾದ ಕುಟುಂಬಗಳಿಗೆ ಜೆಡಿಎಸ್ ಯುವ ಮುಖಂಡ ಹಾಗೂ ಬಿಬಿಎಂಪಿ ಮಾಜಿ ಸದಸ್ಯ ಇಮ್ರಾನ್ ಪಾಷ ದಿನಸಿ ಕಿಟ್‍ಗಳು ಹಾಗೂ ಆರ್ಥಿಕ ನೆರವನ್ನು ಒದಗಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಇಮ್ರಾನ್ ಪಾಷ, ಕೋವಿಡ್ ಲಾಕ್‍ಡೌನ್ ಹಾಗೂ ಮಳೆಯಿಂದಾಗಿ ಕೇವಲ ಬೆಂಗಳೂರು ಅಷ್ಟೇ ಅಲ್ಲ ಇಡೀ ರಾಜ್ಯದಲ್ಲಿ ಬಡವರು ಹಾಗೂ ಕೂಲಿ ಕಾರ್ಮಿಕರು ಸಮಸ್ಯೆಗೊಳಗಾಗಿದ್ದಾರೆ. ಅರ್ಫಾತ್ ನಗರದಲ್ಲಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ನೂರಾರು ಕುಟುಂಬಗಳು ತೊಂದರೆಗೊಳಗಾಗಿವೆ. ಸಂಕಷ್ಟದಲ್ಲಿರುವ ಕುಟುಂಬಗಳಿಗೆ ವೈಯಕ್ತಿಕವಾಗಿ ನೆರವು ನೀಡಲಾಗುತ್ತಿದೆ ಎಂದರು.

ಲಾಕ್‍ಡೌನ್ ಹಿನ್ನೆಲೆಯಲ್ಲಿ ಬಡವರು ಹಾಗು ಕೂಲಿ ಕಾರ್ಮಿಕರು ಉದ್ಯೋಗಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಇದರಿಂದಾಗಿ, ಅವರ ದಿನನಿತ್ಯದ ಬದುಕಿಗೆ ಅಗತ್ಯವಿರುವ ಸೌಲಭ್ಯವನ್ನು ಪಡೆದುಕೊಳ್ಳಲು ಅವರಿಗೆ ಆಗುತ್ತಿಲ್ಲ. ಆದುದರಿಂದ, ಸಂಕಷ್ಟದಲ್ಲಿರುವ ಅರ್ಫಾತ್ ನಗರದ ನಿವಾಸಿಗಳಿಗೆ ದಿನನಿತ್ಯದ ಬದುಕಿಗೆ ಅಗತ್ಯವಿರುವ ದಿನಸಿ ಪದಾರ್ಥಗಳು ಹಾಗೂ ಆರ್ಥಿಕ ನೆರವನ್ನು ನೀಡಲಾಗಿದೆ ಇಮ್ರಾನ್ ಪಾಷ ಹೇಳಿದರು. ಈ ಸಂದರ್ಭದಲ್ಲಿ ಜೆಡಿಎಸ್ ಯುವ ಮುಖಂಡ ಇರ್ಫಾನ್ ಪಾಷ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News