ವಿಶಾಲ ಗಾಣಿಗ ಕೊಲೆ ಪ್ರಕರಣ: ಸುಪಾರಿ ಕಿಲ್ಲರ್‌ಗೆ ನ್ಯಾಯಾಂಗ ಬಂಧನ
Update: 2021-08-02 20:38 IST
ಉಡುಪಿ, ಆ. 2: ಬ್ರಹ್ಮಾವರ ಕುಮ್ರಗೋಡಿನ ಫ್ಲ್ಯಾಟ್ ನಲ್ಲಿ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಕಸ್ಟಡಿಯಲ್ಲಿದ್ದ ಸುಪಾರಿ ಹಂತಕ ಉತ್ತರ ಪ್ರದೇಶದ ಗೋರಖಪುರ ನಿವಾಸಿ ಸ್ವಾಮಿನಾಥ ನಿಶಾದ (38)ನನ್ನು ಪೊಲೀಸರು ಸೋಮವಾರ ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಸ್ವಾಮಿನಾಥ ನಿಶಾದ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಮುಗಿದ ಹಿನ್ನೆಲೆ ಯಲ್ಲಿ ಪ್ರಕರಣದ ತನಿಖಾಧಿಕಾರಿ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತ ಪದ್ಮನಾಭ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಈ ಪ್ರಕರಣದ ಪ್ರಮುಖ ಆರೋಪಿ ವಿಶಾಲ ಗಾಣಿಗರ ಪತಿ ರಾಮಕೃಷ್ಣ ಗಾಣಿಗ(42) ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ತಲೆಮರೆಸಿಕೊಂಡಿರುವ ಇನ್ನೋರ್ವ ಸುಪಾರಿ ಕಿಲ್ಲರ್‌ಗಾಗಿ ಪೊಲೀಸರು ಶೋಧ ಕಾರ್ಯ ಮುಂದು ವರೆಸಿದ್ದಾರೆ.