ಕಾರ್ಕಳ : ಅರ್ಬಿ ಫಾಲ್ಸ್‌ ನಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿನಿ ಮೃತ್ಯು

Update: 2021-08-02 15:26 GMT

ಕಾರ್ಕಳ : ನಿಟ್ಟೆ ಗ್ರಾಮದ ಪರಪ್ಪಾಡಿ ಅರ್ಬಿ ಫಾಲ್ಸ್‌ ವೀಕ್ಷಣೆಗೆ ಸ್ನೇಹಿತರೊಂದಿಗೆ ತೆರಳಿದ ಕಾರ್ಕಳ ತಾಲೂಕಿನ ಕಾಲೇಜೊಂದರ ವಿದ್ಯಾರ್ಥಿನಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.

ಮೃತ ಯುವತಿಯನ್ನು ಮಂಗಳೂರಿನ ವರ್ಷಿತಾ (19) ಎಂದು ಗುರುತಿಸಲಾಗಿದೆ.

ಇಬ್ಬರು ವಿದ್ಯಾರ್ಥಿಗಳೊಂದಿಗೆ ಅರ್ಬಿ ಫಾಲ್ಸ್‌ಗೆ ತೆರಳಿದ್ದ ವರ್ಷಿತಾ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಕಾಲೇಜಿನ ಹಾಸ್ಟೆಲ್‌ ವಿದ್ಯಾರ್ಥಿನಿಯಾಗಿದ್ದ ಈಕೆ ನೀರಿನ ಸುಳಿಯಿಂದ ಮೇಲೆ ಬರಲಾಗದೇ ಮೃತಪಟ್ಟಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಕಾರ್ಕಳ ಅಗ್ನಿ ಶಾಮಕ ದಳ ತೆರಳಿ ಮೃತದೇಹವನ್ನು ಮೇಲಕೆತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News