ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಬೀದರ್ ಪ್ರಥಮ: ಕೇಂದ್ರ ಸಚಿವ ಭಗವಂತ ಖೂಬಾ

Update: 2021-08-02 16:40 GMT

ಬೆಂಗಳೂರು, ಆ.2: 2021-22ನೇ ಸಾಲಿನಲ್ಲಿ ಬೀದರ್ ಜಿಲ್ಲೆಯಲ್ಲಿ ಒಟ್ಟು 2,56,000 ರೈತರಲ್ಲಿ 2,29,375 (ಶೇ.89.59) ರೈತರು ತಮ್ಮ ಬೆಳೆಗಳಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು, ಈ ವರ್ಷವು ಬೀದರ್ ಜಿಲ್ಲೆ ನೋಂದಣಿÂಯಲ್ಲಿ ಕರ್ನಾಟಕ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಜಿಲ್ಲೆಯ ಸಮಸ್ತ ರೈತ ಬಾಂಧವರಿಗೆ, ರಾಷ್ಟ್ರೀಕೃತ ಬ್ಯಾಂಕಿನವರಿಗೆ, ಡಿ.ಸಿ.ಸಿ. ಬ್ಯಾಂಕಿನವರಿಗೆ ಮತ್ತು ಕಾಮನ್ ಸರ್ವಿಸ್ ಸೆಂಟರ್‍ನ ವಿ.ಎಲ್.ಇ.ಗಳಿಗೆ ಧನ್ಯವಾದಗಳು ತಿಳಿಸಿರುವ ಭಗವಂತ ಖೂಬಾ, ಬೀದರ್ ಜಿಲ್ಲೆಯೂ ಯೋಜನೆ ಪ್ರಾರಂಭವಾದ ವರ್ಷದಿಂದ ನೋಂದಣಿಯಲ್ಲಿ ಪ್ರಥಮ ಸ್ಥಾನಗಳಿಸುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News