ಹೊರ ರಾಜ್ಯದ ಪ್ರಯಾಣಿಕರಿಗೆ ಹೋಂ ಕ್ವಾರಂಟೈನ್ ಕಡ್ಡಾಯ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‍ಗುಪ್ತಾ

Update: 2021-08-02 17:22 GMT

ಬೆಂಗಳೂರು, ಆ.2: ಕೇರಳ, ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯದಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರು ಕೋವಿಡ್ ಪರೀಕ್ಷೆಗೆ ಒಳಗಾಗಿ ವರದಿ ಬರುವವರೆಗೆ ಕ್ವಾರಂಟೈನ್‍ನಲ್ಲಿರಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‍ಗುಪ್ತ ತಿಳಿಸಿದ್ದಾರೆ.

ಬಿಬಿಎಂಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರರಾಜ್ಯಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರಯಾಣಿಕರನ್ನು ವಿಮಾನ ನಿಲ್ದಾಣ, ರೈಲ್ವೆ ಹಾಗೂ ಬಸ್ ನಿಲ್ದಾಣಗಳಲ್ಲೇ ಕೋವಿಡ್ ಪರೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಹೊರರಾಜ್ಯದ ಪ್ರಯಾಣಿಕರು ಕಡ್ಡಾಯವಾಗಿ ಹೋಂ ಕ್ವಾರಂಟೈನ್‍ನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಈಗಾಗಲೆ ವಲಯವಾರು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪಾಲಿಕೆ ಸೂಚನೆಯನ್ನು ಮೀರಿದರೆ ಕಠಿಣ ಕ್ರಮ ಜಾರಿಗೊಳಿಸಲಾಗುವುದು ಎಂದು ಎವರು ತಿಳಿಸಿದ್ದಾರೆ.
ಬೆಂಗಳೂರು ನಗರಕ್ಕೆ ಪ್ರತಿದಿನ ಒಂದು ಲಕ್ಷಕ್ಕೂ ಅಧಿಕ ಲಸಿಕೆಗಳು ಬೇಕಾಗಿದೆ. ಇನ್ನು, ಇದುವರೆಗೂ ಶೇ.67ರಷ್ಟು ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದಾರೆ. ಇದರಲ್ಲಿ ಶೇ.82ರಷ್ಟು ಮಂದಿ 45ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆಂದು ಅವರು ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News