ಬೆಂಗಳೂರು: ಕಾಲೇಜಿನಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ; ಆರೋಪ

Update: 2021-08-03 12:17 GMT

ಬೆಂಗಳೂರು, ಆ.3: ರಾಜಧಾನಿಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ನಿಧಾನವಾಗಿ ಹೆಚ್ಚಾಗುತ್ತಿರುವ ಹೊತ್ತಿನಲ್ಲಿಯೇ ಖಾಸಗಿ ಕಾಲೇಜುವೊಂದರಲ್ಲಿ ಯುವಕರನ್ನು ಸೇರಿಸಿ ಮೋಜು ಮಸ್ತಿ ಮಾಡಿರುವ ಆರೋಪ ಕೇಳಿಬಂದಿದೆ.

ನಗರದ ಮಾರತ್ತಹಳ್ಳಿ ಬಳಿಯ ನ್ಯೂ ಹಾರಿಜನ್ ಕಾಲೇಜಿನಲ್ಲಿ ಇತ್ತೀಚಿಗೆ ಸ್ನೇಹಿತರ ದಿನಾಚರಣೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆ ಮಾಡಿರುವ ದೂರುಗಳು ಬೆಳಕಿಗೆ ಬಂದಿವೆ.

ರಾಜ್ಯ ಸರಕಾರ ಜಾರಿಗೊಳಿಸಿರುವ ಕೊರೋನ ಮಾರ್ಗಸೂಚಿಯ ನಿಯಮಗಳನ್ನು ಗಾಳಿಗೆ ತೂರಿ ಮೋಜು ಮಾಸ್ತಿ ಮಾಡಲಾಗಿದ್ದು, ಯಾವುದೇ ಮಾಹಿತಿ ನೀಡದೆ, ಅಪಾರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಒಂದು ಕಡೆ ಜಮಾಯಿಸಿದ್ದಾರೆ ಎಂದು ಹೇಳಲಾಗುತ್ತದೆ.

ಈ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ಮಾತ್ರ ಲಸಿಕೆ ಪಡೆದಿದ್ದು, ಹಲವಾರು ಮಂದಿ ಕೋವಿಡ್ ಪರೀಕ್ಷೆ ನಡೆಸದೆ, ಜಮಾಯಿಸಿದ್ದಾರೆ. ಇದರಿಂದ ಸೋಂಕು ಹರಡುವ ಭೀತಿಯೂ ಉಂಟಾಗಿದೆ ಎನ್ನಲಾಗಿದೆ.

ಮತ್ತೊಂದೆಡೆ ವಿದ್ಯಾರ್ಥಿಗಳು ಪಾಲ್ಗೊಂಡ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News