ಬಿಬಿಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳ: ಅಪಾರ್ಟ್‍ಮೆಂಟ್‍ಗಳಲ್ಲಿ ಹೆಚ್ಚಿನ ನಿಗಾ; ಗೌರವ್‍ಗುಪ್ತಾ

Update: 2021-08-03 12:39 GMT

ಬೆಂಗಳೂರು, ಆ.3: ಬಿಬಿಎಂಪಿ ವ್ಯಾಪ್ತಿಯಲ್ಲಿ ಅಪಾರ್ಟ್‍ಮೆಂಟ್‍ಗಳಲ್ಲಿ ಹೆಚ್ಚು ಕೋವಿಡ್ ಪ್ರಕರಣ ಕಂಡು ಬರುತ್ತಿದೆ. ಈ ನಿಟ್ಟಿನಲ್ಲಿ ಅಪಾರ್ಟ್‍ಮೆಂಟ್ ಅಸೋಸಿಯೇಷನ್ ಜತೆಗೆ ಚರ್ಚಿಸಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗುವುದೆಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‍ಗುಪ್ತ ತಿಳಿಸಿದ್ದಾರೆ.

ಮಂಗಳವಾರ ಬಿಬಿಎಂಪಿ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರಕರಣಗಳು ಹೆಚ್ಚಾಗಿ ಕಂಡು ಬರುವ ಕಡೆಗಳಲ್ಲಿ ಈಗಾಗಲೇ ಸೀಲ್‍ಡೌನ್, ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಲಾಗುತ್ತಿದೆ. ಹಾಗೂ ರಾತ್ರಿ ಕಫ್ರ್ಯೂವನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಪೊಲೀಸ್ ಇಲಾಖೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 
ಬೆಂಗಳೂರಿನಲ್ಲಿ ಪ್ರತಿನಿತ್ಯ 500ಕ್ಕಿಂತ ಕಡಿಮೆ ಪ್ರಕರಣಗಳು ಕಂಡು ಬರುತ್ತಿದೆ. ಆದರೆ, ಹೊರ ರಾಜ್ಯದ ಪ್ರಯಾಣಿಕರಿಂದ ಆತಂಕ ಹೆಚ್ಚಾಗಿದೆ. ಮುಖ್ಯವಾಗಿ ಕೇರಳ ಹಾಗೂ ಮಹಾರಾಷ್ಟ್ರದ ಪ್ರಯಾಣಿಕರ ಬಗ್ಗೆ ಎಚ್ಚರಿಕೆ ವಹಿಸಿ, ಅವರನ್ನು ಬಸ್‍ನಿಲ್ದಾಣ, ರೈಲು ಹಾಗೂ ವಿಮಾನ ನಿಲ್ದಾಣಗಳಲ್ಲೇ ತಪಾಸಣೆ ನಡೆಸಿ ವರದಿ ಬರುವವರೆಗೆ ಕ್ವಾರಂಟೈನ್ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯ ಪ್ರತಿಯೊಬ್ಬರಿಗೂ ಕೋವಿಡ್ ಲಸಿಕೆ ನೀಡುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯವಾದ ಲಸಿಕೆ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಆರ್‍ಟಿಪಿಸಿಆರ್ ನೆಗೆಟಿವ್ ಪ್ರಮಾಣಪತ್ರ ತಂದಿಲ್ಲದ ಹೊರರಾಜ್ಯದ ಪ್ರಯಾಣಿಕರನ್ನು ರೈಲು, ವಿಮಾನ ಹಾಗೂ ಬಸ್ ನಿಲ್ದಾಣಗಳಲ್ಲಿ ತಪಾಸಣೆ ನಡೆಸಿ ವರದಿ ಬರುವವರೆಗೆ ಸರಕಾರದ ವತಿಯಿಂದಲೇ ಹೊಟೇಲ್‍ನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಐಶಾರಾಮಿ ಹೊಟೇಲ್ ವ್ಯವಸ್ಥೆ ಬೇಕಿದ್ದವರು ತಮ್ಮ ಖರ್ಚಿನಲ್ಲಿ ಉಳಿದುಕೊಳ್ಳಬಹುದು.

-ಗೌರವ್‍ಗುಪ್ತ, ಮುಖ್ಯ ಆಯುಕ್ತರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News