ಚರ್ಚೆಯಿಲ್ಲದೆ ಶಸ್ತ್ರಾಸ್ತ್ರ ಕಾರ್ಖಾನೆ ನೌಕರರ ಮುಷ್ಕರದ ವಿರುದ್ಧ ಲೋಕಸಭೆಯಲ್ಲಿ ಮಸೂದೆ ಅಂಗೀಕಾರ

Update: 2021-08-03 13:15 GMT

ಹೊಸದಿಲ್ಲಿ: ಪೆಗಾಸಸ್ ಗೂಢಚರ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆಯಲ್ಲಿ ಮಂಗಳವಾರ ಮಸೂದೆಯೊಂದನ್ನು ಅಂಗೀಕರಿಸಲಾಗಿದೆ.

 ಶಸ್ತ್ರಾಸ್ತ್ರ ಕಾರ್ಖಾನೆಗಳ ನೌಕರರು ಮುಷ್ಕರ ನಡೆಸುವುದನ್ನು ನಿಷೇಧಿಸುವ ಅಗತ್ಯ ರಕ್ಷಣಾ ಸೇವೆಗಳ ಮಸೂದೆ-2021 ಯಾವುದೇ ಚರ್ಚೆಯಿಲ್ಲದೆ ಧ್ವನಿ ಮತದಿಂದ ಅಂಗೀಕರಿಸಲ್ಪಟ್ಟಿದೆ.

ಮಧ್ಯಾಹ್ನ 2 ಗಂಟೆಗೆ ಸದನದ ಕಲಾಪ ಆರಂಭವಾಯಿತು. ವಿರೋಧ ಪಕ್ಷದ ನಾಯಕರು ಘೋಷಣೆಗಳನ್ನು ಕೂಗಿದರು ಹಾಗೂ ಪೆಗಾಸಸ್ ಪ್ರಕರಣದ ಬಗ್ಗೆ ಚರ್ಚೆಗೆ ಒತ್ತಾಯಿಸಿ ಗದ್ದಲವನ್ನು ಸೃಷ್ಟಿಸಿದರು. ಗದ್ದಲದ ನಡುವೆ ರಕ್ಷಣಾ ಖಾತೆಯ ರಾಜ್ಯ ಸಚಿವ ಅಜಯ್ ಭಟ್ ಅವರು ಮಸೂದೆಯನ್ನು ಮಂಡಿಸಿದರು.

ಮಸೂದೆಯನ್ನು ಕಠಿಣವೆಂದು ಕರೆದ ಪ್ರತಿಪಕ್ಷಗಳು, ಈ ಮಸೂದೆಯು ನೌಕರರ ಪ್ರತಿಭಟನೆಯ ಪ್ರಜಾಪ್ರಭುತ್ವದ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

 ಸದನದಲ್ಲಿ ಹಾಜರಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಸೂದೆಯನ್ನು ಅಂಗೀಕರಿಸುವ ಮೊದಲು ಸರಕಾರವು ಎಲ್ಲ ನೌಕರರ ಸಂಘಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News