ಆಟೋ ಕನಿಷ್ಠ ದರ ಏರಿಕೆಗೆ ಆಟೋ ಚಾಲಕರ ಸಂಘಟನೆಗಳಿಂದ ಸರಕಾರಕ್ಕೆ ಮನವಿ

Update: 2021-08-03 14:17 GMT

ಬೆಂಗಳೂರು, ಆ.3: ಆಟೋ ಕನಿಷ್ಠ ದರವನ್ನು 30ರೂ.ಗೆ ಏರಿಕೆ ಮಾಡುವಂತೆ ಆಟೋ ಚಾಲಕರ ಸಂಘಟನೆಗಳಿಂದ ಸರಕಾರಕ್ಕ್ಕೆ ಮನವಿ ಮಾಡಿದೆ.

ದಿನೇ ದಿನೇ ಆಟೋ ಗ್ಯಾಸ್ ದರ ಏರಿಕೆಯಾಗುತ್ತಿರುವ ಹಿನ್ನೆಲೆ ಆಟೋ ಚಾಲಕರು ಆಕ್ರೋಶಗೊಂಡಿದ್ದಾರೆ. ಕೊರೋನದಿಂದ ಜೀವನ ನಡೆಸಲು ಕಷ್ಟಕರವಾಗಿರುವ ಸಮಯದಲ್ಲಿ ಆಟೋ ಗ್ಯಾಸ್ ದರ ಏರಿಕೆಯಾಗುತ್ತಿರುವುದರಿಂದ ಆಟೋ ಚಾಲಕರಿಗೆ ನಷ್ಟವಾಗಿದೆ ಎಂದು ಆಟೋ ಚಾಲಕರ ಸಂಘಟನೆಗಳು ಸರಕಾರದ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತಿ ಲೀಟರ್ ಆಟೋ ಗ್ಯಾಸ್ ದರ 56 ರೂಪಾಯಿಗೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 5.50 ರೂಪಾಯಿ ಏರಿಕೆಯಾಗಿದೆ. ಆಟೋ ಪ್ರಯಾಣದ ಕನಿಷ್ಠ ದರವನ್ನು ಏರಿಕೆ ಮಾಡುವಂತೆ ಆಟೋ ಚಾಲಕರ ಸಂಘಟನೆ ಸರಕಾರಕ್ಕೆ ಮನವಿ ಮಾಡಿದೆ.

ಆಟೋ ಕನಿಷ್ಠ ದರ 25 ರೂಪಾಯಿಯಿಂದ 30 ರೂಪಾಯಿಗೆ ಏರಿಕೆ ಮಾಡುವಂತೆ ಆಟೋ ಸಂಘಟನೆಗಳು ಬೇಡಿಕೆ ಮಾಡಿಕೊಂಡಿದೆ. ಕಳೆದ ಒಂಬತ್ತು ವರ್ಷಗಳ ಹಿಂದೆ ಆಟೋ ಕನಿಷ್ಠ ಮೀಟರ್ ದರ ಏರಿಕೆಯಾಗಿತ್ತು. ಪ್ರತಿ ಮೂರು ವರ್ಷಕ್ಕೊಮ್ಮೆ ಆಟೋ ಮಿನಿಮಮ್ ದರ ಏರಿಕೆ ಮಾಡುವ ಅವಕಾಶವಿದ್ದು, ಸಾರಿಗೆ ಇಲಾಖೆ ಏರಿಕೆಗೆ ಅವಕಾಶ ನೀಡಿಲ್ಲವೆಂದು ಆದರ್ಶ ಆಟೋ ಚಾಲಕರ ಸಂಘಟನೆಯ ಅಧ್ಯಕ್ಷ ಮಂಜುನಾಥ್ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News