ದ.ಕ. ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್‌ಗೆ 9 ಮಂದಿ ಬಲಿ; 307 ಮಂದಿಗೆ ಸೋಂಕು ದೃಢ
Update: 2021-08-03 20:34 IST
ಮಂಗಳೂರು, ಆ.3: ದ.ಕ. ಜಿಲ್ಲೆಯಲ್ಲಿ ಮಂಗಳವಾರ 9 ಮಂದಿ ಕೋವಿಡ್‌ಗೆ ಬಲಿಯಾಗಿದ್ದು, 307 ಮಂದಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.5.26ಕ್ಕೆ ಏರಿಕೆ ಕಂಡಿದೆ.
ಜಿಲ್ಲೆಯಲ್ಲಿ ಮಂಗಳವಾರ 286 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 96,903 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1,01,306 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲೆಯಲ್ಲಿ 1,443 ಮಂದಿ ಮೃತಪಟ್ಟಿದ್ದು, 2,960 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.