ಟೋಕಿಯೊ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ. ಸಿಂಧುಗೆ ಭವ್ಯ ಸ್ವಾಗತ

Update: 2021-08-03 17:25 GMT

ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದು ಸ್ವದೇಶಕ್ಕೆ ಮರಳಿರುವ ಪಿ.ವಿ. ಸಿಂಧು ಅವರಿಗೆ ಮಂಗಳವಾರ ಭವ್ಯವಾದ ಸ್ವಾಗತ ನೀಡಲಾಯಿತು.

ಸಿಂಧು ಅವರು ದಿಲ್ಲಿಯ ಇಂದಿರಾ ಗಾಂಧಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಪ್ರವೇಶಿಸುತ್ತಿದ್ದಂತೆ ನಿಲ್ದಾಣದ ಸಿಬ್ಬಂದಿ ಚಪ್ಪಾಳೆ ತಟ್ಟಿ ಅವರನ್ನು ಸ್ವಾಗತಿಸಿದರು. ಮಾಸ್ಕ್ ಧರಿಸಿದ್ದ ಸಿಂಧು ಅವರನ್ನು ಭದ್ರತಾ ಸಿಬ್ಬಂದಿ ಸುತ್ತುವರಿದಿದ್ದರು.

ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ಅಜಯ್ ಸಿಂಘಾನಿಯಾ ಅವರು  ಭಾರತೀಯ ಕ್ರೀಡಾ ಪ್ರಾಧಿಕಾರದ ಇತರ ಅಧಿಕಾರಿಗಳೊಂದಿಗೆ ಸಿಂಧು ಅವರನ್ನು ಬರಮಾಡಿಕೊಂಡರು. ಆ ನಂತರ ಸಿಂಧು ಹಾಗೂ ಅವರ ಕೋಚ್ ದ.ಕೊರಿಯಾದ ಪಾರ್ಕ್ ತೇ ಸ್ಯಾಂಗ್ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News