ಮಹಿಳಾ ನಿಲಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Update: 2021-08-03 17:46 GMT

ಉಡುಪಿ, ಆ.3: ಉಡುಪಿ ಜಿಲ್ಲಾಸ್ಪತ್ರೆಯ ಎನ್‌ಸಿಡಿ ವಿಭಾಗದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಂಗಳವಾರ ನಿಟ್ಟೂರು ಮಹಿಳಾ ನಿಲಯದಲ್ಲಿ ಏರ್ಪಡಿಸಲಾಗಿತ್ತು.

ಶಿಬಿರವನ್ನು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಉದ್ಘಾಟಿಸಿದರು. ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ನಾಗರತ್ನ ಅಸಾಂಕ್ರಾಮಿಕ ರೋಗಗಳ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಮಹಿಳಾ ವಿಭಾಗದಿಂದ ನಿಲಯದ 70 ಮಹಿಳೆಯರಿಗೆ ವಾಟರ್ ಬಾಟಲ್ ಹಾಗೂ ಸ್ಯಾನಿಟೈಸರ್ ಉಚಿತವಾಗಿ ವಿತರಿಸಿದರು.

ಈ ಶಿಬಿರದಲ್ಲಿ ಉಚಿತ ಮಧುಮೇಹ, ರಕ್ತ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ ಹಾಗೂ ಕ್ಷಯ ರೋಗ ಕಫಾ ಪರೀಕ್ಷೆ, ಎಚ್‌ಐವಿ ಪರೀಕ್ಷೆ, ಮಲೇರಿಯಾ ಪರೀಕ್ಷೆಯನ್ನು ನಡೆಸಲಾಯಿತು. ಜಿಲ್ಲಾಸ್ಪತ್ರೆಯ ಕಣ್ಣಿನ ತಜ್ಞ ಡಾ.ನಿತ್ಯಾನಂದ ನಾಯಕ್, ದಂತ ವೈದ್ಯಕೀಯ ವಿಭಾಗದ ಡಾ.ಬಿಸು ನಾಯಕ್ ಚಿಕಿತ್ಸೆ ನೀಡಿದರು. ಎಸ್‌ಸಿಡಿಯ ವೈದ್ಯರು ಮತ್ತು ಆಪ್ತ ಸಮಾಲೋಚಕರು ಮಹಿಳಾ ನಿಲಯದ ಮಹಿಳೆಯರಿಗೆ ತಪಾಸಣೆ ಮತ್ತು ಆರೋಗ್ಯ ಮಾಹಿತಿ ಶಿಕ್ಷಣ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News