ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ ಜನ್ಮ ದಿನಾಚರಣೆ

Update: 2021-08-04 08:15 GMT

ಮಂಗಳೂರು, ಆ.4: ಮೊಳಹಳ್ಳಿ ಶಿವರಾಯರು 87 ವರ್ಷಗಳ ಜೀವಿತಾವಧಿಯಲ್ಲಿ ಸುಮಾರು 60 ವರ್ಷಗಳ ಕಾಲ ಸಹಕಾರಿ ಕ್ಷೇತ್ರವನ್ನು ಬೆಳೆಸುವಲ್ಲಿ ಅಪಾರ ಶ್ರಮ ವಹಿಸಿದ್ದಾರೆ. ಸಹಕಾರಿ ಕ್ಷೇತ್ರವಲ್ಲದೆ ಶಿಕ್ಷಣ ಕ್ಷೇತ್ರದಲ್ಲೂ ಕೂಡ ಕೆಲಸ ಮಾಡಿದ ಹಿರಿಮೆ ಮೊಳಹಳ್ಳಿ ಅವರದ್ದಾಗಿದೆ. 107 ವರ್ಷ ಪೂರೈಸಿರುವ ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಭಧ್ರ ಬುನಾದಿ ಹಾಕಿಕೊಟ್ಟಿದ್ದರಿಂದಲೇ ಬ್ಯಾಂಕ್ ಇಂದು ರಾಜ್ಯ ಮಾತ್ರವಲ್ಲದೆ ದೇಶದಲ್ಲಿ ಉತ್ತಮ ಹೆಸರು ಪಡೆದಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಭಿಪ್ರಾಯಪಟ್ಟರು.

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಸಹಯೋಗದಲ್ಲಿ ಬುಧವಾರ ನಗರದ ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಆಯೋಜಿಸಲಾದ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ 141ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿದರು. ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ.ಜಿ.ರಾಜಾರಾಮ್ ಭಟ್, ಡಾ.ಬೆಳಪು ದೇವಿಪ್ರಸಾಸ್ ಶೆಟ್ಟಿ, ಶಿವಕುಮಾರ್ ರೈ, ಸದಾಶಿವ ಉಳ್ಳಾಲ್, ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್ ಬಿ.ನಾಯಕ್, ಬ್ಯಾಂಕ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಚಂದ್ರ ಬಿ., ನಬಾರ್ಡ್ ಡಿಡಿಎಂ ಸಂಗೀತಾ ಕರ್ತಾ, ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಪ್ರವೀಣ್ ಉಪಸ್ಥಿತರಿದ್ದರು.

ಬ್ಯಾಂಕ್‌ನ ಮಹಾಪ್ರಬಂಧಕ ಗೋಪಿನಾಥ ಭಟ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News