ಪಂಜಿಮೊಗರು: ಸರಕಾರಿ ಶಾಲೆಯ ಮುಖ್ಯ ಶಿಕ್ಷಕಿಯ ವಿರುದ್ಧ ಪ್ರತಿಭಟನೆ

Update: 2021-08-04 09:40 GMT

ಮಂಗಳೂರು, ಆ.4: ನಗರದ ಪಂಜಿಮೊಗರಿನ ದ.ಕ. ಜಿಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ  ಸರ್ವಾಧಿಕಾರಿ ಧೋರಣೆ ಎಂದು ಆರೋಪಿಸಿ ಬುಧವಾರ ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿಯ ನೇತೃತ್ವದಲ್ಲಿ ಶಾಲೆಯ ಎದುರು ಪ್ರತಿಭಟನೆ ನಡೆಯಿತು.

ಮುಖ್ಯ ಶಿಕ್ಷಕಿಯು ಶಿಕ್ಷಣ ವಿರೋಧಿಯಾಗಿದ್ದು, ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಗಾಲು ಹಾಕುತ್ತಿದ್ದಾರೆ. ಊರವರು ಸೇರಿಕೊಂಡು ಅಭಿವೃದ್ಧಿಪಡಿಸಿದ ಮತ್ತು ಮಾದರಿ ಶಾಲೆಯಾಗಿ ರೂಪುಗೊಂಡಿದ್ದ ಶಾಲೆಯನ್ನು ಮುಖ್ಯ ಶಿಕ್ಷಕಿ ಚಂದ್ರಾವತಿ ನಾಶ ಮಾಡುತ್ತಿದ್ದಾರೆ ಎಂದು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರೂ ಆಗಿರುವ ದಯಾನಂದ ಶೆಟ್ಟಿ ಆರೋಪಿಸಿದ್ದಾರೆ.

ಪ್ರತಿಭಟನಾ ಸ್ಥಳಕ್ಕಾಗಿಮಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಪೂಂಜಾ ಒಂದು ವಾರದೊಳಗೆ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ಶಾಲಾಭಿವೃದ್ದಿ ಸಮಿತಿಯ ಸದಸ್ಯರಾದ ಚಂದ್ರ ನಾಯ್ಕ್, ಅಸ್ಗರ್, ಮಂಜುಳಾ, ಶಾರದಾ, ಬಶೀರ್, ನೌಶಾದ್, ಶೈನಾಝ್, ಕುಲ್ಸುಬಾನು ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News