ಬಾಲಕಿಗೆ ಲೈಂಗಿಕ ಕಿರುಕುಳ: ಪೊಕ್ಸೊ ಕಾಯ್ದೆಯಡಿ ಆರೋಪಿ ಬಂಧನ

Update: 2021-08-04 13:39 GMT

ಕಾರ್ಕಳ, ಆ.4: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಎಸಗಿರುವ ಆರೋಪಕ್ಕೆ ಸಂಬಂಧಿಸಿ ಯುವಕರ್ನೋವನನ್ನು ಕಾರ್ಕಳ ಪೊಲೀಸರು ಪೊಕ್ಸೋ ಕಾಯಿದೆಯಡಿ ಬಂಧಿಸಿದ್ದಾರೆ.

ಗುಲ್ವಾಡಿಯ ಇಮ್ರಾನ್ (24) ಬಂಧಿತ ಆರೋಪಿ. ಈತ 12 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ಉಡುಪಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ಬಂದಿದ್ದು ಅದರಂತೆ ಅಪ್ರಾಪ್ತ ಬಾಲಕಿಯ ಮನೆಗೆ ಭೇಟಿ ನೀಡಿದ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಸಂತ್ರಸ್ತೆ ಜೊತೆ ಆಪ್ತ ಸಮಾಲೋಚನೆ ನಡೆಸಿದರು.

ಈ ಬಗ್ಗೆ ಪ್ರಭಾಕರ ಆಚಾರ್ ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದು ಅದರಂತೆ ಆರೋಪಿ ವಿರುದ್ಧ ಪೋಕ್ಸೋ ಮತ್ತು ಐ.ಟಿ. ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಕಾರ್ಕಳ ವೃತ್ತ ನಿರೀಕ್ಷಕ ಸಂಪತ್ ಕುಮಾರ್ ಮಾರ್ಗದರ್ಶನ ದಲ್ಲಿ ಠಾಣಾ ಉಪ ನಿರೀಕ್ಷಕ ಮಧು ಆರೋಪಿಯನ್ನು ಬಂಧಿಸಿದ್ದಾರೆ.

ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೊನಾಲ್ಡ್ ಫುರ್ಟಾಡೋ ಅವರ ಆದೇಶದಂತೆ ಅಪ್ರಾಪ್ತ ಬಾಲಕಿಗೆ ಸೂಕ್ತ ಪುನರ್ವಸತಿ ಕಲ್ಪಿಸಲಾಗಿದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಆಪ್ತಸಮಾಲೋಚಕಿ ಅಂಬಿಕಾ, ಸಮಾಜ ಕಾರ್ಯಕರ್ತ ಯೋಗೀಶ್, ಕಾರ್ಕಳ ನಗರ ಠಾಣಾ ಸಿಬ್ಬಂದಿಗಳಾದ ಶ್ಯಾಮ್, ರವೀಂದ್ರ ಮೊದಲಾದವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News