ಶಿರಾಡಿ, ಚಾರ್ಮಾಡಿ ಭೂಕುಸಿತ: ದುರಸ್ತಿಗಾಗಿ ಕೇಂದ್ರ ಸಚಿವರಿಗೆ ಸಂಸದ ನಳಿನ್ ಮನವಿ

Update: 2021-08-04 14:42 GMT

ಮಂಗಳೂರು, ಆ.4: ಮಂಗಳೂರಿನಿಂದ ರಾಜ್ಯದ ಇತರ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ರಾ.ಹೆ.75ರ ಶಿರಾಡಿ ಘಾಟ್ ಹಾಗೂ ರಾ.ಹೆ. 73ರ ಚಾರ್ಮಾಡಿ ಘಾಟ್‌ನಲ್ಲಿ ಇತ್ತೀಚೆಗೆ ಭಾರೀ ಮಳೆಯಿಂದ ಉಂಟಾದ ಭೂ ಕುಸಿತದಿಂದಾಗಿ ರಸ್ತೆ ಸಂಪರ್ಕಕ್ಕೆ ಅಡಚಣೆಯುಂಟಾಗಿದೆ. ದುರಸ್ತಿಗೊಳಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಸಂಸದ ನಳಿನ್‌ ಕುಮಾರ್ ಕಟೀಲ್ ಮನವಿ ಸಲ್ಲಿಸಿದ್ದಾರೆ.

ಹೆದ್ದಾರಿ ದುರಸ್ತಿಗೆ ಅಗತ್ಯವಿರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಘಾಟ್ ಸೆಕ್ಷನ್‌ಗಳಲ್ಲಿ ಭೂಕುಸಿತ ತಡೆಗಟ್ಟುವ ಹಿನ್ನೆಲೆಯಲ್ಲಿ ಅಗತ್ಯವಿರುವ ಶಾಶ್ವತ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸಂಸದ ನಳಿನ್‌ಕುಮಾರ್ ಕಟೀಲ್ ಮನವಿ ಮಾಡಿದರು.

ಸಂಸದರ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು, ಬೇಡಿಕೆಗಳ ಬಗ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿ, ಶೀಘ್ರದಲ್ಲಿ ಈಡೇರಿಸುವ ಭರವಸೆ ನೀಡಿದ್ದಾರೆ ಎಂದು ಸಂಸದರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News