ಚೀನಾ ವಿವಿಯಲ್ಲಿ ಭಾರತದ ವಿದ್ಯಾರ್ಥಿಯ ಮೃತದೇಹ ಪತ್ತೆ ಪ್ರಕರಣ: ಹತ್ಯೆಗೈದ ಆರೋಪಿಯ ಬಂಧನ

Update: 2021-08-04 16:05 GMT
ಸಾಂದರ್ಭಿಕ ಚಿತ್ರ

ಬೀಜಿಂಗ್, ಆ.4: ಜುಲೈಯಲ್ಲಿ ಚೀನಾದ ವಿವಿ ಆವರಣದಲ್ಲಿ ಮೃತಪಟ್ಟ ರೀತಿಯಲ್ಲಿ ಪತ್ತೆಯಾದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದ್ದು ಆರೋಪಿಯನ್ನು ಬಂಧಿಸಿರುವುದಾಗಿ ಚೀನಾದ ಅಧಿಕಾರಿಗಳು ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಬಿಹಾರದ ಅಮನ್ ನಾಗ್ಸೇನ್ ಎಂಬ ವಿದ್ಯಾರ್ಥಿ ಚೀನಾದ ತಿಯಾನ್ಜಿನ್ ಫಾರಿನ್ ಸ್ಟಡೀಸ್ ವಿವಿಯಲ್ಲಿ ಅಧ್ಯಯನ ನಡೆಸುತ್ತಿದ್ದು , ಆತನ ಮೃತದೇಹ ವಿವಿ ಆವರಣದಲ್ಲಿರುವ ಹಾಸ್ಟೆಲ್ನಲ್ಲಿ ಜುಲೈ 29ರಂದು ಪತ್ತೆಯಾಗಿತ್ತು. 

ಈತನನ್ನು ಹರಿತವಾದ ಆಯುಧದಿಂದ ಇರಿದು ಹತ್ಯೆ ಮಾಡಿರುವುದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ತಿಳಿದು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
 ಇದೇ ವಿವಿಯ ವಿದ್ಯಾರ್ಥಿಯಾಗಿರುವ ಮತ್ತೊಬ್ಬ ವಿದೇಶಿ ಪ್ರಜೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕೊಲೆ ಮಾಡಿರುವುದು ಪ್ರಾಥಮಿಕ ವಿಚಾರಣೆಯಲ್ಲಿ ಸಾಬೀತಾಗಿದೆ. ಇನ್ನಷ್ಟು ವಿಚಾರಣೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಘಟನೆಯ ಬಗ್ಗೆ ಭಾರತದ ಅಧಿಕಾರಿಗಳಿಗೆ ಜುಲೈ 30ರಂದೇ ಮಾಹಿತಿ ನೀಡಿದ್ದು ಆ ಬಳಿಕ ಭಾರತೀಯ ರಾಯಭಾರಿ ಕಚೇರಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದು ಚೀನಾದ ಅಧಿಕಾರಿಗಳು ಹೇಳಿದ್ದಾರೆ.‌

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News