ಎರಡು ಬಾರಿ ಪ್ರಮಾಣವಚನ ಸ್ವೀಕರಿಸಿದ ಶಂಕರ್ ಪಾಟೀಲ್

Update: 2021-08-04 16:21 GMT

ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ನೂತನ ಸಚಿವರಾಗಿ ಶಂಕರ್ ಪಾಟೀಲ್ ಅವರು 2 ಬಾರಿ ಪ್ರಮಾಣ ವಚನ ಸ್ವೀಕರಿಸಿದ ಪ್ರಸಂಗ ನಡೆಯಿತು.  

ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ ಅವರು 'ಸಚಿವರಾಗಿ ಅಧಿಕಾರಪದ ಮತ್ತು ಗೌಪ್ಯತಾ ಪ್ರಮಾಣ ವಚನವನ್ನು ಪ್ರತ್ಯೇಕವಾಗಿ ಸ್ವೀಕರಿಸುವ ಬದಲು ಅಧಿಕಾರಪದದ ಪ್ರತಿಜ್ಞಾ ವಿಧಿಯನ್ನು ಎರಡು ಬಾರಿ ಸ್ವೀಕರಿಸಿದ್ದನ್ನು ಗಮನಿಸಿ ರಾಜಭವನಕ್ಕೆ ಕರೆಸಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರ ಸಮ್ಮುಖದಲ್ಲಿ ಮತ್ತೊಮ್ಮೆ ಪ್ರಮಾಣ ವಚನವನ್ನು ಬೋಧಿಸಿದರು' ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭು ಶಂಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News