ದ.ಕ. ಜಿಲ್ಲೆ : ಕೋವಿಡ್‌ಗೆ ಆರು ಬಲಿ; 350 ಮಂದಿಗೆ ಕೊರೋನ ಸೋಂಕು

Update: 2021-08-04 16:43 GMT

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್‌ಗೆ ಆರು ಮಂದಿ ಮೃತಪಟ್ಟಿದ್ದು, 350 ಮಂದಿಗೆ ಸೋಂಕು ತಗುಲಿದೆ. ಪಾಸಿಟಿವಿಟಿ ದರ ಶೇ.4.07 ಇದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 212 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ 1,01,656 ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಇಲ್ಲಿಯವರೆಗೆ 97,115 ಮಂದಿ ಗುಣಮುಖರಾಗಿದ್ದಾರೆ.‌ ಜಿಲ್ಲೆಯಲ್ಲಿ 1,449 ಮಂದಿ ಮೃತಪಟ್ಟಿದ್ದು, 3092 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News