ರಾಜ್ಯದ ಕರಾವಳಿಯಲ್ಲಿ ಇನ್ನೆರಡು ದಿನ ವ್ಯಾಪಕ ಮಳೆ

Update: 2021-08-04 19:15 GMT

ಬೆಂಗಳೂರು: ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಆ.6ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದಲ್ಲದೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೆರಡು ದಿನ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಹಾಗೂ ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ, ಗದಗ, ಹಾವೇರಿ, ಬಾಗಲಕೋಟ, ರಾಯಚೂರು, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳ ಕೆಲವು ಕಡೆ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನೆರಡು ತಿಂಗಳು ಮಳೆ: ಮುಂಗಾರು ಋತುವಿನ ಉತ್ತರಾರ್ಧದ ಅವಧಿಯಲ್ಲಿ ಅಂದರೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಬಹುತೇಕ ರಾಜ್ಯಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News