​ಕೋವಿಡ್‌ನಿಂದ ಅನಾಥರಾದ ಮಕ್ಕಳಿಗೆ 5 ಲಕ್ಷದ ಆರೋಗ್ಯ ವಿಮೆ: ಕೇಂದ್ರ ಸರ್ಕಾರ

Update: 2021-08-05 04:22 GMT

ಹೊಸದಿಲ್ಲಿ: ಕೋವಿಡ್-19 ಸೋಂಕಿನಿಂದ ತಂದೆ-ತಾಯಿಯರನ್ನು ಕಳೆದುಕೊಂಡು ಅನಾಥರಾದ ಹದಿನೆಂಟು ವರ್ಷ ವಯಸ್ಸಿನೊಳಗಿನ ಮಕ್ಕಳಿಗೆ ಐದು ಲಕ್ಷ ರೂಪಾಯಿಗಳ ಉಚಿತ ಆರೋಗ್ಯ ವಿಮಾ ಸುರಕ್ಷೆ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಈ ವಿಷಯ ಪ್ರಕಟಿಸಿದ್ದಾರೆ.

ಇದಕ್ಕಾಗಿ ವಿಮಾಕಂತನ್ನು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ತುರ್ತು ಸ್ಥಿತಿಯ ನಾಗರಿಕ ನೆರವು ಮತ್ತು ಪರಿಹಾರ ನಿಧಿ (ಪಿಎಂ-ಕೇರ್ಸ್‌)ಯಿಂದ ಪಾವತಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.

ಯೋಜನೆಯ ವಿವರಗಳನ್ನು ಠಾಕೂರ್ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದು, ಭಾರತವನ್ನು ಸ್ವಾವಲಂಬಿಯಾಗಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಕೈಗೊಂಡ ಕ್ರಮಗಳಿಗೆ ಸಂಬಂಧಿಸಿದ ಸರ್ಕಾರಿ ವೆಬ್‌ಸೈಟ್‌ನ ಲಿಂಕ್ ಕೂಡಾ ಪ್ರಕಟಿಸಿದ್ದಾರೆ.

"ಕೋವಿಡ್‌ನಿಂದ ಅನಾಥರಾದ 18 ವರ್ಷಕ್ಕಿಂತ ಕೆಳಗಿನ ಮಕ್ಕಳ ಕಾಳಜಿಗಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಅಂಗವಾಗಿ 5 ಲಕ್ಷ ರೂಪಾಯಿಗಳ ಉಚಿತ ಆರೋಗ್ಯ ವಿಮೆಯನ್ನು ಆಯುಷ್ಮಾನ್ ಭಾರತ ಯೋಜನೆಯಡಿ ನೀಡಲಾಗುತ್ತದೆ. ಇದರ ವಿಮಾಕಂತನ್ನು ಪಿಎಂ ಕೇರ್ಸ್‌ನಿಂದ ಪಾವತಿಸಲಾಗುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News