ಮಾಜಿ ಸಚಿವ ರೋಶನ್‌ ಬೇಗ್‌ ನಿವಾಸದ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ

Update: 2021-08-05 17:52 GMT

ಬೆಂಗಳೂರು : ಮಾಜಿ ಸಚಿವ ರೋಶನ್‌ ಬೇಗ್‌ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಒಟ್ಟು ಆರು ಕಡೆಗಳಲ್ಲಿ ಇಡಿ ದಾಳಿ ನಡೆಸಿದ್ದು, ಸಿಆರ್‌ಪಿಎಫ್‌ ಭದ್ರತೆಯನ್ನು ಒದಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಇದೀಗ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿದೆ. ಬೆಂಗಳೂರಿನ ಶಿವಾಜಿನಗರದಲ್ಲಿರುವ ರೋಶನ್‌ ಬೇಗ್‌ ನಿವಾಸ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ದಾಳಿ ನಡೆಸಲಾಗಿದೆ.

ಇಡಿ ಅಧಿಕಾರಿಗಳು ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆ ಹಾಗೂ ಮಾಹಿತಿಯನ್ನು ಕಲೆ ಹಾಕುವ ಕಾರ್ಯವನ್ನು ಮಾಡುತ್ತಿದ್ದಾರೆ.

ಬೇಗ್ ಆಪ್ತ ವಶಕ್ಕೆ?

ಮಾಜಿ ಸಚಿವ ರೋಷನ್ ಬೇಗ್ ಆಪ್ತ ಎನ್ನಲಾದ ಶಿವಾಜಿನಗರದ ಎಹ್ಸಾನ್ ಎಂಬಾತನನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News