ಯಾವುದೇ ಒತ್ತಡ ಬಂದರೂ ಮೇಕೆದಾಟು ಅನುಷ್ಠಾನವಾಗಬೇಕು: ಸಾ.ರಾ.ಗೋವಿಂದು

Update: 2021-08-05 13:14 GMT

ಬೆಂಗಳೂರು, ಆ.5: ಕುಡಿಯುವ ನೀರಿನ ಉದ್ದೇಶದ ಮೇಕೆದಾಟು ಯೋಜನೆಯನ್ನು ಯಾವುದೇ ರೀತಿಯ ಒತ್ತಡ ಬಂದರೂ ನಿಲ್ಲಿಸದೆ ಅನುಷ್ಠಾನಗೊಳಿಸಬೇಕು ಎಂದು ಅಖಿಲ ಕರ್ನಾಟಕ ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ತಿಳಿಸಿದ್ದಾರೆ. 

ಗುರುವಾರ ನಗರದ ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಯೋಜನೆ ಅನುಷ್ಠಾನಗೊಳಿಸುವ ವಿಚಾರದಲ್ಲಿ ಪಕ್ಷಾತೀತವಾಗಿ ಎಲ್ಲ್ಲ ರಾಜಕೀಯ ಪಕ್ಷಗಳು ಕೇಂದ್ರ ಸರಕಾರದ ಮೇಲೆ ಒತ್ತಡ ತರಬೇಕು ಎಂದು ಆಗ್ರಹಿಸಿದರು.

ಕನ್ನಡಪರ ಸಂಘಟನೆಗಳು ಮೇಕೆದಾಟು ಯೋಜನೆ ಪರವಾಗಿ ಹಲವು ದಿನಗಳಿಂದಲೂ ಹೋರಾಟ ಮಾಡುತ್ತಾ ಬಂದಿದ್ದು, ಈಗಲೂ ನಿಮ್ಮ ಜತೆಗಿರುತ್ತವೆ ಎಂದ ಅವರು, ಶೀಘ್ರವಾಗಿ ಮೇಕೆದಾಟು ಯೋಜನೆ ಕಾರ್ಯಗತಗೊಳಿಸುವಂತೆ ಮುಖ್ಯಮಂತ್ರಿಯವರಿಗೆ ಮನವಿ ಪತ್ರ ಸಲ್ಲಿಸುವುದಾಗಿ ತಿಳಿಸಿದರು. 

ರಾಜ್ಯದಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿ ಎಂದು ಕರೆಸಿಕೊಂಡಿದ್ದ 10-12 ವರ್ಷಗಳ ಕಾಲ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ತಮಿಳುನಾಡಿನ ಅಣ್ಣಾಮಲೈ ಅವರು ಈ ನಾಡಿನ ಋಣ ತೀರಿಸಬೇಕಿತ್ತು. ಆದರೆ, ಮೇಕೆದಾಟು ಯೋಜನೆ ವಿರುದ್ಧ ಹೋರಾಟ ಮಾಡುತ್ತಿರುವುದು ಖಂಡನೀಯ ಎಂದರು.

ಕೋಲಾರ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ಯೋಜನೆಯಾಗಿದೆ. ಈ ಯೋಜನೆಯನ್ನು ಕೇಂದ್ರದ ಅನುಮತಿ ಪಡೆದು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಹೇಳಿದ್ದಾರೆ. ಇದಕ್ಕಾಗಿ ಅವರನ್ನು ಅಭಿನಂದಿಸುವುದಾಗಿ ಹೇಳಿದರು.

ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್ ಮಾತನಾಡಿ, ಅಣ್ಣಾಮಲೈ ಅವರು ಸ್ವಾರ್ಥಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಅದಕ್ಕೆ ಸರಕಾರÀ ಮಣೆ ಹಾಕಬಾರದು. ತಮಿಳುನಾಡಿನ ಕ್ಯಾತೆಗೆ ಮಾನ್ಯತೆ ಕೊಡದೆ ಮೇಕೆದಾಟು ಕುಡಿಯುವ ನೀರಿನ ಯೋಜನೆಯನ್ನು ಅನುμÁ್ಠನ ಮಾಡಬೇಕೆಂದು ಒತ್ತಾಯಿಸಿದರು. 

ಹಿರಿಯ ನಟ ಮುಖ್ಯಮಂತ್ರಿ ಚಂದ್ರು ಮಾತನಾಡಿ, ತಮಿಳುನಾಡಿನ ಯಾವುದೇ ರೀತಿಯ ಒತ್ತಡಕ್ಕೆ ಮಣಿಯದೆ ಮೇಕೆದಾಟು ಯೋಜನೆಯನ್ನು ಕಾರ್ಯಗತಗೊಳಿಸಬೇಕು. ಇನ್ನು 10-15 ದಿನದಲ್ಲಿ ರಾಜ್ಯ ಸರಕಾರದಿಂದ ಯಾವ ನಿರ್ಧಾರ ಹೊರ ಬರಲಿದೆ ಎಂಬುದನ್ನು ಕಾದು ನೋಡಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News