ಉಡುಪಿ : 134 ಮಂದಿಗೆ ಕೊರೋನ ಪಾಸಿಟಿವ್; ಕೋವಿಡ್ ಗೆ ಇಬ್ಬರು ಬಲಿ

Update: 2021-08-05 14:43 GMT

ಉಡುಪಿ, ಆ.5: ಜಿಲ್ಲೆಯಲ್ಲಿ ಗುರುವಾರ ಇಬ್ಬರು ಸೋಂಕಿತರು ಕೊರೋನಕ್ಕೆ ಬಲಿಯಾಗಿದ್ದಾರೆ. ದಿನದಲ್ಲಿ ಒಟ್ಟು 134 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 79 ಮಂದಿ ಚಿಕಿತ್ಸೆಯ ಬಳಿಕ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈಗಲೂ ಸೋಂಕಿಗೆ 1332 ಮಂದಿ ಸಕ್ರಿಯರಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು ಕಾರ್ಕಳದ 82 ವರ್ಷ ಪ್ರಾಯದ ಪುರುಷ ಹಾಗೂ ಹಾಗೂ ಉಡುಪಿಯ 50 ವರ್ಷ ಪ್ರಾಯದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಮಹಿಳೆ ಆ.3ರಂದು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅದೇ ದಿನ ಮೃತಪಟ್ಟಿದ್ದಾರೆ. ಕೋವಿಡ್ ದೃಢಪಟ್ಟ ಕಾರ್ಕಳದ ವೃದ್ಧರು ಜು.29ರಂದು ಆಸ್ಪತ್ರೆಗೆ ದಾಖಲಾಗಿದ್ದು, ನಿನ್ನೆ ಮೃತಪಟ್ಟಿದ್ದಾರೆ. ಬಹು ಅಂಗ ವೈಫಲ್ಯದಿಂದ ಅವರು ಸಾವನ್ನಪ್ಪಿದ್ದಾರೆ. ಇಬ್ಬರೂ ಕೋವಿಡ್ ಸೋಂಕಿನೊಂದಿಗೆ ಉಸಿರಾಟ ತೊಂದರೆ ಹಾಗೂ ನ್ಯುಮೋನಿಯಾದಿಂದ ನರಳುತಿದ್ದರು. ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಕ್ಕೆ ಬಲಿಯಾದವರ ಸಂಖ್ಯೆ 422ಕ್ಕೇರಿದೆ.

ಇಂದು ಕೊರೋನ ಸೋಂಕು ದೃಢಪಟ್ಟ 134 ಮಂದಿಯಲ್ಲಿ 61 ಮಂದಿ ಪುರುಷರು ಹಾಗೂ 73 ಮಂದಿ ಮಹಿಳೆಯರು. ಇವರಲ್ಲಿ 75 ಮಂದಿ ಉಡುಪಿ ತಾಲೂಕು, 25 ಮಂದಿ ಕುಂದಾಪುರ ಹಾಗೂ 31 ಮಂದಿ ಕಾರ್ಕಳ ತಾಲೂಕಿ ನವರು. ಇವರೊಂದಿಗೆ ಹೊರಜಿಲ್ಲೆಗಳ ಮೂವರು ಪಾಸಿಟಿವ್ ಬಂದಿದ್ದಾರೆ. ಇವರಲ್ಲಿ 17 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 117 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ಬುಧವಾರ 79 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 68,697ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 6759 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 70,451ಕ್ಕೇರಿದೆ ಎಂದು ಡಾ.ಉಡುಪ ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 8,01,951 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

ಇಂದು ಸಹ ಯಾರಲ್ಲೂ ಹೊಸದಾಗಿ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗಿಲ್ಲ. ಸದ್ಯ ಹೊರಜಿಲ್ಲೆಗಳ ಎಂಟು ಮಂದಿ ಮಣಿಪಾಲ ಕೆಎಂಸಿ ಹಾಗೂ ಉಡುಪಿಯ ಆದರ್ಶ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

686 ಮಂದಿಗೆ ಲಸಿಕೆ:  ಉಡುಪಿ ಜಿಲ್ಲೆಯಲ್ಲಿ ಇಂದು 686 ಮಂದಿಗೆ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಇವುಗಳಲ್ಲಿ 530 ಮಂದಿಗೆ ಮೊದಲ ಡೋಸ್ ಹಾಗೂ 156 ಮಂದಿಗೆ ಎರಡನೇ ಡೋಸ್‌ನ್ನು ನೀಡಲಾಗಿದೆ. 18ರಿಂದ 44ವರ್ಷದೊಳಗಿನ 531 ಮಂದಿಗೆ ಹಾಗೂ 45 ವರ್ಷ ಮೇಲ್ಪಟ್ಟ 155 ಮಂದಿಗೆ ಇಂದು ಲಸಿಕೆಯನ್ನು ನೀಡಲಾಗಿದೆ ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News