ನಮಗೂ ಒಳ್ಳೆಯ ಕಾಲ ಬರಲಿದೆ: ಮಾಜಿ ಸಚಿವ ರಮೇಶ್ ಜಾರಕಿಹೊಳಿ

Update: 2021-08-05 14:56 GMT

ಬೆಂಗಳೂರು, ಆ. 5: `ನಮಗೂ ಒಳ್ಳೆಯ ಕಾಲ ಬರುತ್ತದೆ. ಪಕ್ಷ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಲು ಆಗಮಿಸಿದ್ದೆ. ನಮ್ಮೊಂದಿಗೆ ನಮ್ಮ ಕ್ಷೇತ್ರದ ಜನತೆ ಇದ್ದಾರೆ' ಎಂದು ಮಾಜಿ ಸಚಿವ ಹಾಗೂ ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ  ಪ್ರತಿಕ್ರಿಯೆ ನೀಡಿದ್ದಾರೆ.

ಗುರುವಾರ ಇಲ್ಲಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, `ನಾನೀಗ ಪ್ರತಿದಿನ ಬ್ಯಾಡ್ಮಿಂಟನ್ ಆಡುತ್ತಿದ್ದೇನೆ. ನನ್ನ ವಿರುದ್ಧದ ಪ್ರಕರಣ ಸಂಬಂಧ ಪೊಲೀಸರು ಬಿ-ರಿಪೋರ್ಟ್ ಸಲ್ಲಿಕೆ ಬಗ್ಗೆ ನನಗೆ ಗೊತ್ತಿಲ್ಲ. ನೋಡೋಣ ಏನಾಗುತ್ತೋ' ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News