ಉಡುಪಿ: ಶುಕ್ರವಾರ ಎರಡನೇ ಡೋಸ್ ಲಸಿಕೆ ವಿತರಣೆ

Update: 2021-08-05 15:48 GMT

ಉಡುಪಿ, ಆ.5: ಉಡುಪಿ ನಗರ ಪ್ರದೇಶದಲ್ಲಿ ಶುಕ್ರವಾರ ಈ ಕೆಳಗಿನ ಮೂರು ಆಸ್ಪತ್ರೆಗಳಲ್ಲಿ ಕೋವಿಡ್-19ಕ್ಕೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗುತ್ತದೆ. ಅಜ್ಜರಕಾಡು ಜಿಲ್ಲಾಸ್ಪತ್ರೆಯ ಸೈಂಟ್ ಸಿಸಿಲಿ ಶಾಲೆಯ ಲಸಿಕೆ ಕೇಂದ್ರದಲ್ಲಿ 100 ಡೋಸ್ ಲಸಿಕೆ ಲಭ್ಯವಿದೆ.

ಅದೇ ರೀತಿ ಕುಕ್ಕಿಕಟ್ಟೆಯ ಎಫ್‌ಪಿಎಐಯ ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಕೇಂದ್ರದಲ್ಲಿ ಕೋವಿಶೀಲ್ಡ್ 2ನೇ ಡೋಸ್ 50 ಹಾಗೂ ಕೋವ್ಯಾಕ್ಸಿನ್ 2ನೇ ಡೋಸ್ 100 ಲಭ್ಯವಿದೆ. ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್‌ಎಸ್) ಆಸ್ಪತ್ರೆಯಲ್ಲಿ ಆ.20ರೊಳಗೆ ವಿದೇಶ ಪ್ರಯಾಣ ಕೈಗೊಳ್ಳುವವರಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 28 ದಿನಗಳ ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ 100 ಡೋಸ್ ಲಭ್ಯವಿದೆ.

ಗ್ರಾಮೀಣ ಪ್ರದೇಶದಲ್ಲಿ ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನ ಮೀರಿದವರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಪಡೆದು 4 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ ಅಥವಾ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತ ಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News