ಆ.6: ನೂತನ ಸಚಿವ ಸುನೀಲ್ ಕುಮಾರ್ ಉಡುಪಿ ಜಿಲ್ಲೆಗೆ ಭೇಟಿ
ಉಡುಪಿ, ಆ.5: ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ನೂತನ ಸಚಿವರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಕಾರ್ಕಳ ಶಾಸಕ ಸುನೀಲ್ ಕುಮಾರ್ ಶುಕ್ರವಾರ ಮೊದಲ ಬಾರಿ ತಮ್ಮ ಕ್ಷೇತ್ರ ಹಾಗೂ ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿಯೂ ನೇಮಕಗೊಂಡಿರುವ ಅವರು ನಾಳೆ ಬೆಳಗ್ಗೆ 12 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ದಿಂದ ಬೆಳ್ಮಣ್ ಮಾರ್ಗವಾಗಿ ಕಾರ್ಕಳಕ್ಕೆ ತೆರಳುವರು. 12:30ಕ್ಕೆ ಕಾರ್ಕಳ ಬಂಡಿಮಠ ದಲ್ಲಿ ಸಾರ್ವಜನಿಕ ಸನ್ಮಾನ ಸಮಾರಂಭ ನಡೆಯಲಿದೆ.
ಅಪರಾಹ್ನ ಉಡುಪಿಗೆ ಆಗಮಿಸುವ ಅವರು 3 ಗಂಟೆಗೆ ಉಡುಪಿಯ ಅಮೃತ್ ಗಾರ್ಡನ್‌ನಲ್ಲಿ ಬಿಜೆಪಿ ಪಕ್ಷದ ವತಿಯಿಂದ ಆಯೋಜಿಸಲಾಗುವ ಸಾರ್ವಜನಿಕ ಸನ್ಮಾನ ಸಮಾರಂಭದಲ್ಲಿ ಭಾಗವಹಿಸುವರು, ಸಂಜೆ 5:30ಕ್ಕೆ ಕೃಷ್ಣಮಠಕ್ಕೆ ಭೇಟಿ ನೀಡುವ ಅವರು 6 ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯುವ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಳ್ಳುವರು. ರಾತ್ರಿ 7 ಕ್ಕೆ ಹಿರಿಯಡ್ಕ ವೀರಭದ್ರ ದೇವಸ್ಥಾನಕ್ಕೆ ಭೇಟಿ ನೀಡಿ, ನಂತರ ಕಾರ್ಕಳದಲ್ಲಿ ವಾಸ್ತವ್ಯ ಮಾಡುವರು.