ಕರ್ನಾಟಕ-ಮಹಾರಾಷ್ಟ್ರ ಜಲ ವಿವಾದ: ಮಾತುಕತೆ ಮೂಲಕ ಪರಿಹರಿಸಿಕೊಳ್ಳಲು ಪವಾರ್-ಬೊಮ್ಮಾಯಿ ಚರ್ಚೆ

Update: 2021-08-06 13:48 GMT
photo- @CMofKarnataka

ಬೆಂಗಳೂರು, ಆ. 6: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಹಾರಾಷ್ಟ್ರ ಮಾಜಿ ಮುಖ್ಯಮಂತಿ, ರಾಜ್ಯಸಭಾ ಸದಸ್ಯ ಹಾಗೂ ಎನ್‍ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಭೇಟಿ ಮಾಡಿ ಸಮಾಲೋಚನೆ ನಡೆಸಿರುವುದು ರಾಜಕೀಯ ಕುತೂಹಲಕ್ಕೆ ಕಾರಣವಾಗಿದೆ.
ಶುಕ್ರವಾರ ಇಲ್ಲಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಉಭಯ ನಾಯಕರು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. `ಕರ್ನಾಟಕ ರಾಜ್ಯ ಹಾಗೂ ಮಹಾರಾಷ್ಟ್ರ ರಾಜ್ಯಗಳ ನಡುವಿನ ನೀರು ಹಂಚಿಕೆ ವಿಷಯದ ಕುರಿತು ಇಬ್ಬರು ಮುಖಂಡರು ಸಮಾಲೋಚನೆ ನಡೆಸಿದ್ದು, ಇದೊಂದು ಸೌಹಾರ್ದಯುತ ಭೇಟಿಯಷ್ಟೇ' ಎಂದು ಸ್ಪಷ್ಟಪಡಿಸಲಾಗಿದೆ.
ಮಳೆ ಮತ್ತು ಪ್ರವಾಹದ ಸಂದರ್ಭದಲ್ಲಿ ಪರಸ್ಪರ ಸಹಕಾರ. ಉಭಯ ರಾಜ್ಯಗಳ ಜಲ ವಿವಾದಗಳನ್ನು ಪರಸ್ಪರ ಮಾತುಕತೆ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವ ಸಂಬಂಧ ಶರದ್ ಪವಾರ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತುಕತೆ ನಡೆಸಿದ್ದಾರೆ.

ದಿಲ್ಲಿಯಲ್ಲಿ ಶೀಘ್ರದಲ್ಲೆ ಸಭೆ: ಕರ್ನಾಟಕ ಹಾಗೂ ಮಹಾರಾಷ್ಟ್ರ ಉಭಯ ರಾಜ್ಯಗಳ ನಡುವಿನ ಮಹದಾಯಿ, ಕಳಸ-ಬಂಡೂರಿ ಸೇರಿದಂತೆ ಅಂತರ ರಾಜ್ಯ ಜಲ ವಿಷಯ ಮತ್ತು ನದಿ ನೀರು ಹಂಚಿಕೆ ಕುರಿತು ವಿಸ್ತೃತ ಚರ್ಚೆ ನಡೆಸಲು ಶೀಘ್ರದಲ್ಲಿ ಸಭೆ ನಡೆಸಲು ಸಹಮತ ವ್ಯಕ್ತಪಡಿಸಿದ್ದು, ಈ ಕುರಿತಂತೆ ಹೊಸದಿಲ್ಲಿಯಲ್ಲಿ ಶೀಘ್ರದಲ್ಲೆ ಸಭೆ ನಿಗದಿ ಮಾಡುವ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News