×
Ad

ಮಡಿಕೇರಿ: ವಾರದೊಳಗೆ ಮಳೆಹಾನಿ ಪರಿಹಾರ ; ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ

Update: 2021-08-06 18:31 IST

ಮಡಿಕೇರಿ ಆ.6 : ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಸಂಭವಿಸಿದ ಅತಿವೃಷ್ಟಿಯಿಂದ ಮನೆಗಳನ್ನು ಕಳೆದುಕೊಂಡು ಅತಂತ್ರ ಸ್ಥಿತಿಯಲ್ಲಿರುವವರಿಗೆ ಇನ್ನು ಒಂದು ವಾರದಲ್ಲಿ ಪರಿಹಾರ ದೊರಕಿಸಿ ಕೊಡುವುದಾಗಿ ಕೋವಿಡ್ ಹಾಗೂ ಮಳೆಹಾನಿ ಪರಿಸ್ಥಿತಿಯ ಕೊಡಗು ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ.  ನಗರದ ಜಿ.ಪಂ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಳೆದ ಬಾರಿ ಸಂಭವಿಸಿದ ಅತಿವೃಷ್ಟಿಯಲ್ಲಿ ಮನೆಗಳನ್ನು ಕಳೆದುಕೊಂಡ ಕೆಲವು ಕುಟುಂಬಗಳಿಗೆ ಇನ್ನೂ ಕೂಡ ಮನೆ ದೊರಕದಿರುವ ಕುರಿತು ಮಾಹಿತಿ ಲಭಿಸಿದೆ. ಆದ್ದರಿಂದ ಮನೆ ಕಳೆದುಕೊಂಡವರಿಗೆ ಮತ್ತು ಮನೆ ಹಾನಿಗೊಳಗಾದವರಿಗೆ ಒಂದು ವಾರದೊಳಗೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಮನೆಗಳ ನಿರ್ಮಾಣಕ್ಕೆ ನಿವೇಶನಗಳನ್ನು ಗುರುತಿಸುವ ಕಾರ್ಯ ಕೂಡ ಇದೇ ಅವಧಿಯಲ್ಲಿ ಆಗಲಿದೆ ಎಂದು ಭರವಸೆ ನೀಡಿದರು. 
ಶಾಸಕ ಕೆ.ಜಿ.ಬೋಪಯ್ಯ ಹಾಗೂ ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಈ ಸಂದರ್ಭ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News