×
Ad

ಬೆಂಗಳೂರು: ಡ್ರಗ್ಸ್ ಮಾರಾಟ: ನೈಜೀರಿಯನ್ ಪ್ರಜೆ ಸೆರೆ

Update: 2021-08-06 18:49 IST

ಬೆಂಗಳೂರು, ಆ.6: ನಗರದಲ್ಲಿ ಅಕ್ರಮವಾಗಿ ನೆಲೆಸಿ ಡ್ರಗ್ ಮಾರಾಟ ಮಾಡುತ್ತಿದ್ದ ನೈಜೀರಿಯನ್ ಪ್ರಜೆಯನ್ನು ಬಂಧಿಸಿ 5 ಲಕ್ಷ ಮೌಲ್ಯದ ಎಂಡಿಎಂಎ, ಎಸ್ಟಟೆನ್ಸಿ ಮಾತ್ರೆಗಳು ಹಾಗೂ ಎಲ್‍ಎಸ್‍ಡಿ ಸ್ಟ್ರಿಪ್‍ಗಳನ್ನು ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತನನ್ನು ನೈಜೀರಿಯನ್ ಮೂಲದ ಇಮಾನ್ಯುಯಲ್ ಜೇಮ್ಸ್ ಎಂದು ಗುರುತಿಸಲಾಗಿದೆ. ಈತನಿಂದ 5 ಲಕ್ಷ ಮೌಲ್ಯದ ಡ್ರಗ್ಸ್, ಮೊಬೈಲ್ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಅಕ್ರಮವಾಗಿ ನೆಲೆಸಿದ್ದ ಆರೋಪಿಯು ಪಾಸ್‍ಪೋರ್ಟ್ ನಿಯಮಗಳನ್ನು ಉಲ್ಲಂಘಿಸಿ ಅಕ್ರಮವಾಗಿ ನೆಲೆಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದು, ಡ್ರಗ್ಸ್ ಪ್ರಕರಣವೊಂದರಲ್ಲಿ ಹಲಸೂರು ಪೊಲೀಸರಿಂದ ಬಂಧಿತನಾಗಿ ಇತ್ತೀಚೆಗಷ್ಟೇ ಜೈಲಿನಿಂದ ಜಾಮೀನು ಪಡೆದು ಹೊರ ಬಂದಿದ್ದ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News