ಟ್ವೆಂಟಿ-20: ಬಾಂಗ್ಲಾದೇಶಕ್ಕೆ ಆಸ್ಟ್ರೇಲಿಯ ವಿರುದ್ಧ ಐತಿಹಾಸಿಕ ಸರಣಿ ಗೆಲುವು

Update: 2021-08-06 17:20 GMT
photo : twitter/@ICC

ಢಾಕಾ: ಕನಿಷ್ಠ ಸ್ಕೋರ್ ಗಳ  ಮೂರನೇ ಟ್ವೆಂಟಿ-20 ಪಂದ್ಯದಲ್ಲಿ ಆತಿಥೇಯ ಬಾಂಗ್ಲಾದೇಶ ತಂಡ ಆಸ್ಟ್ರೇಲಿಯ ತಂಡದ ವಿರುದ್ಧ 10 ರನ್ ಗಳ ರೋಚಕ ಜಯ ದಾಖಲಿಸಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 3-0 ಮುನ್ನಡೆ ಪಡೆದು ಸರಣಿ ವಶಪಡಿಸಿಕೊಂಡಿದೆ.

ಬಾಂಗ್ಲಾದೇಶವು ಎಲ್ಲ 3 ಮಾದರಿಯ ಕ್ರಿಕೆಟ್ ನಲ್ಲಿ ಇದೇ ಮೊದಲ ಬಾರಿ ಆಸ್ಟ್ರೇಲಿಯ ವಿರುದ್ಧ ಸರಣಿ ಗೆದ್ದುಕೊಂಡು ಇತಿಹಾಸ ರಚಿಸಿದೆ.

ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್  ಮಾಡಿದ ಬಾಂಗ್ಲಾದೇಶ 9 ವಿಕೆಟ್ ನಷ್ಟಕ್ಕೆ ಕೇವಲ 127 ರನ್ ಗಳಿಸಿತ್ತು. ಗೆಲ್ಲಲು 128 ರನ್ ಸುಲಭ ಗುರಿ ಬೆನ್ನಟ್ಟಿದ್ದ ಆಸ್ಟ್ರೇಲಿಯ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 117 ರನ್ ಗಳಿಸಿ ಸೋಲೊಪ್ಪಿಕೊಂಡಿತು.

ಶರೀಫುಲ್ ಇಸ್ಲಾಂ(2-29) ಯಶಸ್ವಿ ಬೌಲರ್ ಎನಿಸಿಕೊಂಡರು. ಅಹ್ಮದ್ ಹಾಗೂ ಶಕೀಬ್ ಅಲ್ ಹಸನ್ ತಲಾ ಒಂದು ವಿಕೆಟ್ ಪಡೆದು ಆಸ್ಟ್ರೇಲಿಯವನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕಿ ತಂಡಕ್ಕೆ ಅಸಾಧ್ಯದ ಗೆಲುವು ತಂದುಕೊಟ್ಟರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News