×
Ad

ಆ.28-29ರಂದು ಸಿಇಟಿ ಪರೀಕ್ಷೆ

Update: 2021-08-06 23:20 IST

ಬೆಂಗಳೂರು, ಆ.6: ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ, 2021ನೆ ಸಾಲಿನ ಸಿಇಟಿ ಪರೀಕ್ಷೆಯನ್ನು ಆ.28 ಮತ್ತು 29ರಂದು ನಡೆಸಲಾಗುವುದು. ಅಭ್ಯರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಸ್ಥಳ ಮತ್ತು ಶುಲ್ಕ ಪಾವತಿಗಳ ವಿವರಗಳನ್ನು ಪರಿಶೀಲಿಸಿಕೊಳ್ಳಲು ಪ್ರಾಧಿಕಾರವು ವೆಬ್ ಪೋರ್ಟಲ್ ಅನ್ನು ಸಿದ್ಧಪಡಿಸಲಾಗಿರುತ್ತದೆ.

ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‍ಸೈಟ್ http://kea.kar.nic.in ಗೆ ಭೇಟಿ ನೀಡಿ ಸಿಇಟಿ-2021ರ ಪರೀಕ್ಷಾ ಸ್ಥಳ ಮತ್ತು ಶುಲ್ಕ ಪಾವತಿಗಳ ವಿವರಗಳನ್ನು ಪರಿಶೀಲಿಸಿಕೊಳ್ಳುವಂತೆ ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News