ಬೆಂಗಳೂರು: ಹಲವು ಕಡೆ ಎನ್‍ಐಎ ದಾಳಿ
Update: 2021-08-07 23:09 IST
ಬೆಂಗಳೂರು, ಆ.7: ಕೆಜಿಹಳ್ಳಿ ಹಾಗೂ ಡಿಜೆಹಳ್ಳಿ ಗಲಭೆ ಪ್ರಕರಣ ಸಂಬಂಧ ನಗರದ ವಿವಿಧೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದರು.
ನಗರ ವ್ಯಾಪ್ತಿಯ ಏಳು ಕಡೆಗಳಲ್ಲಿ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಎಸ್‍ಡಿಪಿಐ, ಪಿಎಫ್‍ಐ ಕಾರ್ಯಕರ್ತರ ಮನೆ ಹಾಗೂ ಕಚೇರಿಯನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಕೆಲವರು ಪರಾರಿಯಾಗಿದ್ದು, ಕೆಲ ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿ ಮಾಡಿ, ತನಿಖೆ ಮುಂದುವರೆಸಲಾಗಿದೆ ಎಂದು ಎನ್‍ಐಎ ತಿಳಿಸಿದೆ.