ಸುಳ್ಯ : ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಶಿಕ್ಷಕ ಸೆರೆ

Update: 2021-08-08 16:20 GMT
ಗುರುರಾಜ್

ಸುಳ್ಯ : ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡು ಅತ್ಯಾಚಾರ ಎಸಗುತಿದ್ದ ಆರೋಪದಲ್ಲಿ ಶಿಕ್ಷಕ ಗುರುರಾಜ್ ಎಂಬಾತನ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಗುರುರಾಜ್ ಪ್ರಾಜೆಕ್ಟ್ ವರ್ಕ್ ನೆಪದಲ್ಲಿ ಸುಮಾರು ಮೂರು ವರ್ಷಗಳಿಂದ ವಿದ್ಯಾರ್ಥಿನಿಯನ್ನು ತನ್ನ ಮನೆಗೆ ಕರೆಸಿಕೊಂಡು  ಅತ್ಯಾಚಾರ ಎಸಗಿದ್ದ ಎನ್ನಲಾಗಿದ್ದು, ಆತನ ಕೃತ್ಯಕ್ಕೆ ಪತ್ನಿ ಸಹಕರಿಸುತ್ತಿದ್ದಳು ಎಂದು ದೂರಲಾಗಿದೆ.

ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಮೊಬೈಲ್ ಮೂಲಕ ಫೋಟೊ ತೆಗೆಯುತ್ತಿದ್ದರು ಹಾಗು ಫೋಟೊ ತೋರಿಸಿ ಬೆದರಿಸಿ ಮನೆಯಿಂದ ಹಣ ತರುವಂತೆ ಒತ್ತಡ ಹೇರುತ್ತಿದ್ದ ಎಂದು ತಿಳಿದುಬಂದಿದೆ. 2018ರಿಂದ ನಿರಂತರವಾಗಿ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿ ಹಣಕ್ಕಾಗಿ ಪಿಡಿಸುತ್ತಿದ್ದರು ಎಂದು ವಿದ್ಯಾರ್ಥಿನಿ ಹಾಗು ಆಕೆಯ ತಾಯಿ ದೂರಿದ್ದಾರೆ.

ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಿಕ್ಷಕ ರಾಯಚೂರು ಮೂಲದ ಗುರುರಾಜ್ ನನ್ನು ಸುಬ್ರಹ್ಮಣ್ಯ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿರುವುದಾಗಿ ತಿಳಿದು ಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News