ಬೆಂಗಳೂರು: ಆ.9ರಿಂದ ಮತದಾರರ ಪಟ್ಟಿ ಪರಿಷ್ಕರಣೆ

Update: 2021-08-08 17:40 GMT

ಬೆಂಗಳೂರು, ಆ.8: ಆ.9ರಿಂದ ಅ.31ರವರೆಗೆ ಬೆಂಗಳೂರು ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ನಡೆಯಲಿದೆ ಎಂದು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. 

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೆಂಗಳೂರು ವ್ಯಾಪ್ತಿಯಲ್ಲಿ ಜ.5, 2022ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವ ಹಿನ್ನೆಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮಾಡುವ ಸಂಬಂಧ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ.  ಈ ಹಿನ್ನೆಲೆಯಲ್ಲಿ ಆ.9ರಿಂದ ಅ.31ರವರೆಗೆ ಮತದಾರರ ಪಟ್ಟಿಯನ್ನು ಹೆಸರನ್ನು ತೆಗೆಯುವ, ಸೇರಿಸುವ ಪ್ರಕ್ರಿಯೆ, ಮನೆ ಮನೆ ಸಮೀಕ್ಷೆ ಕಾರ್ಯ ನಡೆಯಲಿದೆ. 

ನ.1, 2021 ಮತದಾರರ ಪಟ್ಟಿಯ ಕರಡು ಬಿಡುಗಡೆಯಾಗಲಿದೆ. ನ.30, 2021ರವರೆಗೆ ಮತದಾರರು ತಮ್ಮ ದೂರುಗಳನ್ನು ಸಲ್ಲಿಸಿ, ಪರಿಷ್ಕರಣೆಗೆ ಒಳಗಾಗಬಹುದು. ನಂತರ ಜ.5, 2022ಕ್ಕೆ ಮತದಾರರ ಪಟ್ಟಿ ಬಿಡುಗಡೆಯಾಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News