ಬೈಕ್ ಢಿಕ್ಕಿ: ಪಾದಚಾರಿ ಮೃತ್ಯು
Update: 2021-08-09 22:46 IST
ಕಾರ್ಕಳ, ಆ.9: ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗೆ ಕುಕ್ಕುಂದೂರು ಗ್ರಾಮದ ದುರ್ಗಾ ನಗರ ಬಳಿ ನಡೆದಿದೆ.
ಬೈಲೂರು ಕಡೆಯಿಂದ ಬಂದ ಬಸ್ಸಿನಿಂದ ದುರ್ಗಾನಗರ ಬಳಿ ಇಳಿದು ರಸ್ತೆ ದಾಟುತ್ತಿದ್ದ ನಾರಾಯಣ ಅವರಿಗೆ ಕಾರ್ಕಳ ಕಡೆಯಿಂದ ಬೈಲೂರು ಕಡೆಗೆ ಹೋಗುತ್ತಿದ್ದ ಬೈಕ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.