ದರೋಡೆ ಪ್ರಕರಣ : ಇಬ್ಬರು ಆರೋಪಿಗಳ ಸೆರೆ
Update: 2021-08-09 23:59 IST
ಉಪ್ಪಿನಂಗಡಿ : ಕೊಕ್ಕಡ ಸೌತಡ್ಕ ಸಮೀಪದ ಕೌಕ್ರಾಡಿ ಗ್ರಾಮದ ನೂಜೆ ತುಕ್ರಪ್ಪ ಶೆಟ್ಟಿ ಎಂಬವರ ಮನೆ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನೆಲ್ಯಾಡಿ ಹೊಸಮಜಲು ನಿವಾಸಿ ಚಂದ್ರಶೇಖರ ಶೆಟ್ಟಿ (50) ಹಾಗೂ ಸೂರಿಂಜೆಯ ದಾವೂದ್ ಹಕೀಂ (36) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.