×
Ad

ಪರಿಶಿಷ್ಟ ಜಾತಿಯವರಿಗೆ ಹಕ್ಕುಪತ್ರ ನೀಡಲು ಯೋಜನೆ : ಸಚಿವ ಕೋಟ ಶ್ರೀನಿವಾಸ ಪೂಜಾರಿ

Update: 2021-08-10 20:01 IST

ಕುಂದಾಪುರ ಆ.10: ಪರಿಶಿಷ್ಟ ಜಾತಿಯವರಿಗೆ ಮನೆಗೆ ಅಗತ್ಯವಿರುವ ವಿದ್ಯುತ್, ನೀರು, ಶೌಚಾಲಯದ ಜೊತೆಗೆ ಭೂಮಿಯ ಹಕ್ಕುಪತ್ರ ನೀಡಲು ಯೋಜನೆಗೆ ರೂಪಿಸಲಾಗಿದೆ. ಈ ಸಂಬಂಧ ಮುಂದಿನ ವಾರ ಸಭೆ ಕರೆದು ಚರ್ಚಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕುಂದಾಪುರ ಬಿಜೆಪಿ ಕಚೇರಿಗೆ ಮಂಗಳವಾರ ಭೇಟಿ ನೀಡಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಸಮಾಜ ಕಲ್ಯಾಣ ಇಲಾಖೆ ಯಡಿಯಲ್ಲಿ 1.22 ಕೋಟಿ ಪರಿಶಿಷ್ಟ ಜಾತಿಯವರಿದ್ದು, ಅವರಲ್ಲಿ 4 ರಿಂದ 5 ಲಕ್ಷ ಕುಟುಂಬಗಳಿಗೆ ಮನೆಯ ಅವಶ್ಯಕತೆ ಇರುತ್ತದೆ. ಇವರಿಗೆ ಮನೆ ನಿರ್ಮಾಣಕ್ಕೆ ಅನುದಾನವನ್ನು 5 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಈ ಹಣದಿಂದ ಮನೆ ಕಟ್ಟಲು ಸಾಧ್ಯವಿಲ್ಲ. ಆದರೆ ಇರುವುದರಲ್ಲಿ ಉತ್ತಮವಾಗಿ ಮನೆ ಕಟ್ಟಲು ಸಾಧ್ಯವಾಗುತ್ತದೆ ಎಂದರು.

ಪೌರಕಾರ್ಮಿಕರಿಗೆ ಸೌಲಭ್ಯ

ಪೌರ ಕಾರ್ಮಿಕರಾಗಿ ದುಡಿಯುತ್ತಿರುವ ಅನೇಕರಿಗೆ ಮನೆ ಇಲ್ಲ. ಹಾಗಾಗಿ ಪ್ರತಿ ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆಯಲ್ಲಿ ದುಡಿಯು ತ್ತಿರುವ ಪೌರಕಾರ್ಮಿಕ ಮಾಹಿತಿಯನ್ನು ಪಡೆದುಕೊಳ್ಳಲಿದ್ದೇನೆ. ಆ ಬಗ್ಗೆ ಅಧ್ಯಯನ ನಡೆಸಿ ಅವರಿಗೂ ಸೌಲಭ್ಯ ದೊರಕುವಂತೆ ಮಾಡಲಾ ಗುವುದು ಎಂದು ಸಚಿವರು ತಿಳಿಸಿದರು.

ಹೊಸ ತಾಲೂಕು ರಚನೆಯಾದಲ್ಲಿ 25 ಇಲಾಖೆಗಳು ಅದರ ಅಡಿಯಲ್ಲಿ ಬರಬೇಕು. ಕೆಲವು ಕಡೆ ಸಾಫ್ಟ್‌ವೇರ್‌ನಲ್ಲಿ ಹೊಸ ತಾಲೂಕು ವಿಂಗಡನೆ ಆಗಿಲ್ಲ. ಅದನ್ನು ಸರಿಪಡಿಸಿಕೊಂಡು ಹೊಸ ಬದಲಾವಣೆ ಕಂಡುಕೊಳ್ಳುವ ನಿಟ್ಟಿನಲ್ಲಿ ಸರಕಾರ ಶೀಘ್ರವೇ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಬಿಜೆಪಿ ಪ್ರಭಾರಿ ರಾಜೇಶ್ ಕಾವೇರಿ, ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಕ್ಷೇತ್ರಾಧ್ಯಕ್ಷ ಶಂಕರ್ ಅಂಕದಕಟ್ಟೆ, ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷ ಕಿಶೋರ್ ಕುಮಾರ್, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಐರೋಡಿ ವಿಠ್ಠಲ ಪೂಜಾರಿ, ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪಾ ಪೈ ಉಪಸ್ಥಿತರಿದ್ದರು.

ಕೇಸ್ ವಾಪಾಸ್ಸಿಗೆ ಗೃಹ ಸಚಿವರಿಗೆ ಮನವಿ

ಕುಂಭಾಶಿ ಆನೆಗುಡ್ಡೆ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮ ದವರೊಂದಿಗೆ ಮಾತ ನಾಡಿದ ಸಚಿವರು, ಪರಿಶಿಷ್ಟ ಜಾತಿ ಅವರಿಗೆ ಮನೆ ನಿರ್ಮಾಣ ಮಾಡಲು 5ಲಕ್ಷ ರೂ ನೀಡಲು ಹಣಕಾಸು ಇಲಾಖೆಯ ಜೊತೆ ಚರ್ಚೆ ನಡೆಸಿದ್ದೇನೆ. ಸೋಮವಾರ ಪುನಃ ಸಭೆ ಕರೆಯಲಾಗಿದೆ. ಪಾರದರ್ಶಕವಲ್ಲದ ಯೋಜನೆಗಳನ್ನು ರದ್ದು ಪಡಿಸಿ ಬಡವರಿಗೆ ಮೂಲಭೂತ ಸೌಕರ್ಯ ನೀಡಲು ಬೇಕಾದ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದರು

ಕಾರ್ಯಕರ್ತರ ಮೇಲೆ ಕೆಲವು ಸುಳ್ಳು ಕೇಸ್‌ಗಳನ್ನು ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಮಾಡಲಾಗಿತ್ತು. ಆ ಕೇಸ್‌ಗಳನ್ನು ಹಿಂಪಡೆ ಯುವಂತೆ ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರಿಗೆ ಮನವಿ ಮಾಡಿದ್ದೇನೆ. ಸಕರಾತ್ಮಕವಾಗಿ ಸ್ಪಂದಿಸಿದ ಅವರು ಎಲ್ಲಾ ಫೈಲ್ಗಳನ್ನು ತರಿಸಿ ಕೂಲಂಕುಷವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News