×
Ad

ಆ.12ರಂದು ಉಡುಪಿ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ; ಪೂರ್ವಭಾವಿ ಸಭೆ

Update: 2021-08-10 20:25 IST

ಉಡುಪಿ, ಆ.10:ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಚುಕ್ಕಾಣಿ ಹಿಡಿದ ಬಳಿಕ ಆ.12 ಗುರುವಾರದಂದು ಉಡುಪಿ ಜಿಲ್ಲೆಗೆ ಮೊದಲ ಬಾರಿ ಭೇಟಿ ನೀಡಲಿದ್ದು, ಈ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿ ಗಳ ಪೂರ್ವಭಾವಿ ಸಭೆ ಇಂದು ಜಿಲ್ಲಾದಿಕಾರಿ ಕಚೇರಿಯಲ್ಲಿ ನಡೆಯಿತು.

ಮುಖ್ಯಮಂತ್ರಿಗಳ ಸಭೆಗೆ ಜಿಲ್ಲೆಯ ಪ್ರಸಕ್ತ ಕೋವಿಡ್ ಪರಿಸ್ಥಿತಿಯ ಕುರಿತು ಸಮಗ್ರ ವರದಿಯನ್ನು ಸಿದ್ದಪಡಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಜಿಲ್ಲೆಯ ಪ್ರಾಕೃತಿಕ ವಿಕೋಪ ಪರಿಸ್ಥಿತಿಯ ಕುರಿತಂತೆ ವರದಿಯನ್ನು ಸಿದ್ದಪಡಿಸುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೂ ಸೂಚಿಸಿದರು.

ಜಿಲ್ಲಾ ಪಂಚಾಯತ್, ಕೃಷಿ, ತೋಟಗಾರಿಕೆ ಸೇರಿದಂತೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಸಿದ್ದಪಡಿಸಿಟ್ಟುಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬಾಕಿ ಇರುವ ಪ್ರಮುಖ ಸಮಸ್ಯೆಗಳ ಕುರಿತಂತೆ ಮುಖ್ಯಮಂತ್ರಿಗಳ ಗಮನಕ್ಕೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಬಾಗಾಧಿಕಾರಿ ರಾಜು, ಜಿಪಂ ಉಪಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News