ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮರಳಿಸಲು ರಾಹುಲ್ ಗಾಂಧಿ ಆಗ್ರಹ
Update: 2021-08-10 22:21 IST
ಶ್ರೀನಗರ.ಆ.10: ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನವನ್ನು ಮರಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಂಗಳವಾರ ಇಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ ಆಗ್ರಹಿಸಿದರು.
ಕಾಶ್ಮೀರಕ್ಕೆ ಎರಡು ದಿನಗಳ ಭೇಟಿಯನ್ನು ನೀಡಿರುವ ರಾಹುಲ್,ಕಾಂಗ್ರೆಸ್ ಕಾರ್ಯಕರ್ತರು ಪೂರ್ಣ ರಾಜ್ಯ ಸ್ಥಾನಮಾನ ಮರುಸ್ಥಾಪನೆಗಾಗಿ ಅಭಿಯಾನದ ನೇತೃತ್ವನ್ನು ವಹಿಸಬೇಕು ಎಂದು ಕರೆ ನೀಡಿದರು. ಜಮ್ಮು-ಕಾಶ್ಮೀರದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಬೇಕು ಎಂದೂ ಅವರು ಆಗ್ರಹಿಸಿದರು.
ಇದಕ್ಕೂ ಮುನ್ನ ಶ್ರೀನಗರದಲ್ಲಿ ಕಾಂಗ್ರೆಸ್ ಪಕ್ಷದ ಕೇಂದ್ರ ಕಚೇರಿಯನ್ನು ಅವರು ಉದ್ಘಾಟಿಸಿದರು. ಜಮ್ಮು-ಕಾಶ್ಮೀರವು ತನ್ನ ರಾಜ್ಯ ಸ್ಥಾನಮಾನವನ್ನು ಕಳೆದುಕೊಂಡು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲ್ಪಟ್ಟ ಬಳಿಕ ಇದು ಇಲ್ಲಿಗೆ ರಾಹುಲ್ ಗಾಂಧಿಯವರ ಮೊದಲ ಭೇಟಿಯಾಗಿದೆ.