×
Ad

ಸಚಿವ ಈಶ್ವರಪ್ಪ ಹೇಳಿಕೆ ಬಿಜೆಪಿ ಸಂಸ್ಕೃತಿಯ ಪ್ರತಿಬಿಂಬ: ಡಿ.ಕೆ.ಶಿವಕುಮಾರ್

Update: 2021-08-10 22:35 IST

ಬೆಂಗಳೂರು, ಆ.10: ಕಾಂಗ್ರೆಸಿಗರ ವಿರುದ್ಧ ಸಚಿವ ಈಶ್ವರಪ್ಪ ಅವರ ಅವಾಚ್ಯದ ನುಡಿಗಳು ಬಿಜೆಪಿ ಪಕ್ಷದ ನೀಚ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ. ಅವರ ಹೇಳಿಕೆಗೆ ಮುಖ್ಯಮಂತ್ರಿಗಳಿಂದ ಉತ್ತರ ಎದುರು ನೋಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈಶ್ವರಪ್ಪ ಅವರ ಹೇಳಿಕೆ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಪ್ರತಿಕ್ರಿಯೆ ನೀಡಿದ ಅವರು, 'ಈಶ್ವರಪ್ಪ ಅವರ ಹೇಳಿಕೆ ಬಿಜೆಪಿ ಸಂಸ್ಕೃ ತಿಯನ್ನು ಬಿಂಬಿಸುತ್ತದೆ. ಇಡೀ ರಾಜ್ಯ ಬಿಜೆಪಿ ನಾಯಕರ ಹೇಳಿಕೆಗಳನ್ನು ಗಮನಿಸುತ್ತಿದೆ. ಸಂವಿಧಾನದ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ಯಾರನ್ನೂ ದ್ವೇಷಿಸದೇ, ಎಲ್ಲರನ್ನೂ ಒಟ್ಟಾಗಿ ಕೊಂಡೊಯ್ಯುತ್ತೇವೆ ಎಂದು ಪ್ರತಿಜ್ಞೆ ಮಾಡಿ, ಅದಕ್ಕೆ ಬದ್ಧರಾಗಿರದೇ ಕೀಳು ಮಟ್ಟಕ್ಕೆ ಇಳಿದಿದ್ದಾರೆ. ಈ ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸಿಗರು ಇನ್ನೂ ಬದುಕಿದ್ದಾರೆ. ಅವರ ಹೇಳಿಕೆಗೆ ಪ್ರತಿಯೊಬ್ಬ ಕಾಂಗ್ರೆಸಿಗನೂ ಮುಂದಿನ ದಿನಗಳಲ್ಲಿ ಸೂಕ್ತ ಉತ್ತರ ನೀಡುತ್ತಾನೆ.

ಈಶ್ವರಪ್ಪ ಅವರ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿಗಳು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೋ ನೀಡಲಿ. ಆನಂತರ ನಮ್ಮ ಪ್ರತಿಕ್ರಿಯೆ ನೀಡುತ್ತೇವೆ ಎಂದರು. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News