ಜಯಲಲಿತಾ ಆಪ್ತೆ ಶಶಿಕಲಾಗೆ ರಾಜಾತಿಥ್ಯ ನೀಡಿದ್ದ ಆರೋಪ: ಹಿಂಡಲಗಾ ಜೈಲು ಅಧೀಕ್ಷಕರ ಮನೆ ಮೇಲೆ ಎಸಿಬಿ ದಾಳಿ

Update: 2021-08-11 12:32 GMT

ಬೆಳಗಾವಿ, ಆ.11: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆ ಶಶಿಕಲಾ ನಟರಾಜನ್ ಅವರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ರಾಜಾತಿಥ್ಯ ನೀಡಿದ್ದ ಆರೋಪ ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಹಿಂಡಲಗಾ ಕೇಂದ್ರ ಕಾರಾಗೃಹದ ಅಧೀಕ್ಷಕ ಕೃಷ್ಣಕುಮಾರ್ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿದೆ.

ಬುಧವಾರ ಹಿಂಡಲಗಾ ಜೈಲಿನ ವಸತಿ ಗೃಹಕ್ಕೆ ಆಗಮಿಸಿದ ಬೆಂಗಳೂರು ಎಸಿಬಿ ಅಧಿಕಾರಿಗಳ ತಂಡ  ದಾಳಿ ನಡೆಸಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಈ ಹಿಂದೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಯಾಗಿ ಕೃಷ್ಣಕುಮಾರ್‍ಕೆಲಸ ನಿರ್ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಜಯಲಲಿತಾ ಆಪ್ತೆ ಶಶಿಕಲಾಗೆ ಜೈಲಿನಲ್ಲಿ ರಾಜಾತಿಥ್ಯ ಸೌಲಭ್ಯ ಕಲ್ಪಿಸಿರುವ ಬಗ್ಗೆ ಐಪಿಎಸ್ ಅಧಿಕಾರಿ ಡಿ.ರೂಪಾ ಆರೋಪಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News