ಫ್ಯಾಶನ್ ಗೋಲ್ಡ್ ಜುವೆಲ್ಲರಿ ವಂಚನೆ ಪ್ರಕರಣ: ಆರೋಪಿ ನ್ಯಾಯಾಲಯಕ್ಕೆ ಶರಣು
Update: 2021-08-11 18:02 IST
ಕಾಸರಗೋಡು : ಫ್ಯಾಶನ್ ಗೋಲ್ಡ್ ಜುವೆಲ್ಲರಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಟಿ.ಕೆ ಪೂಕೋಯ ತಂಙಳ್ ಬುಧವಾರ ಮಧ್ಯಾಹ್ನ ಹೊಸದುರ್ಗ ನ್ಯಾಯಾಲಯಕ್ಕೆ ಶರಣಾಗಿರುವುದಾಗಿ ತಿಳಿದುಬಂದಿದೆ.
ಪೂಕೋಯ ತಂಙಳ್ ಜ್ಯುವೆಲ್ಲರಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದು, ಕಳೆದ ನವಂಬರ್ ನಿಂದ ತಲೆ ಮರೆಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಪ್ರಕರಣದ ಇನ್ನೋರ್ವ ಆರೋಪಿ ಹಾಶಿಂ ಎಂಬಾತ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಮಾಜಿ ಶಾಸಕ ಎಂ.ಸಿ ಕಮರುದ್ದೀನ್ ರನ್ನು ಈ ಹಿಂದೆ ಬಂಧಿಸಲಾಗಿತ್ತು. ಕಮರುದ್ದೀನ್ ಜೈಲು ವಾಸದ ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದಾರೆ.