ಎಸೆಸೆಲ್ಸಿ: ದಾರುಸ್ಸಲಾಂ ವಿದ್ಯಾರ್ಥಿಗಳ ಸಾಧನೆ
Update: 2021-08-11 18:34 IST
ಉಡುಪಿ, ಆ.11: ಹೂಡೆ ದಾರುಸ್ಸಲಾಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಪರೀಕ್ಷೆ ಬರೆದ 27 ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ವಿಶೇಷ ದರ್ಜೆ ಯಲ್ಲಿ, 18 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ, 7 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.