ವಸತಿ ನಿಲಯ ವಿದ್ಯಾರ್ಥಿನಿಗಳ ಸಾಧನೆ
Update: 2021-08-11 18:45 IST
ಉಡುಪಿ, ಆ.11: ಜಿಲ್ಲೆಯ ಬಿಸಿಎಂ ಹಾಸ್ಟೆಲ್ ವಿದ್ಯಾರ್ಥಿಗಳು ಈ ಬಾರಿಯ ಎಸೆಸೆಲ್ಸಿ ಪರೀಕ್ಷೆ ಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಬ್ರಹ್ಮಾವರದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ಪೂರ್ವ ವಸತಿ ನಿಲಯ ಹಾಗೂ ಬ್ರಹ್ಮಾವರ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ವರ್ಷ ಆರ್.ಶೆಟ್ಟಿ 621(ಶೇ.99.36) ಅಂಕ ಪಡೆದಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಸತಿ ನಿಲಯದಿಂದ ಪರೀಕ್ಷೆ ಬರೆದ 104 ವಿದ್ಯಾರ್ಥಿಗಳ ಪೈಕಿ 12 ವಿದ್ಯಾರ್ಥಿಗಳು ಶೇ.90ಕ್ಕೂ ಅಧಿಕ ಅಂಕ, 27 ವಿದ್ಯಾರ್ಥಿಗಳು ಶೇ.80ಕ್ಕೂ ಅಧಿಕ ಅಂಕ ಪಡೆದು ತೇರ್ಗಡೆಯಾಗಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ದೇವಿಂದರ್.ಎಸ್. ಬೀರದರ್ ತಿಳಿಸಿದ್ದಾರೆ.