×
Ad

ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ

Update: 2021-08-11 20:00 IST

ಉಡುಪಿ, ಆ.11: ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಮತ್ತು ಭಾರತೀಯ ವಿಕಾಸ್ ಟ್ರಸ್ಟ್ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಸ್ವ-ಉದ್ಯೋಗ ಕೈಗೊಳ್ಳಲು ಆಸಕ್ತ ಅಭ್ಯರ್ಥಿಗಳಿಗೆ, ಆಗಸ್ಟ್ 23 ರಿಂದ ಸೆಪ್ಟಂಬರ್ 01ರವರೆಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಮಣಿಪಾಲದ ಭಾರತೀಯ ವಿಕಾಸ್ ಟ್ರಸ್ಟ್‌ನಲ್ಲಿ ಹಮ್ಮಿ ಕೊಳ್ಳಲಾಗಿದೆ.

ಸರಕಾರದಿಂದ ಸ್ವ-ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಉದ್ಯಮ ನಿರ್ವಹಣೆ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಇತ್ಯಾದಿ ವಿಷಯಗಳ ಕುರಿತು ಅಭ್ಯರ್ಥಿಗಳಿಗೆ ಮಾಹಿತಿ ನೀಡಲಾಗುವುದು. 18-40 ವರ್ಷ ವಯಸ್ಸಿನ ಎಸೆಸೆಲ್ಸಿ ಪಾಸಾಗಿರುವ ಆಸಕ್ತ ಅಭ್ಯರ್ಥಿಗಳು ಆ.23 ರಂದು ಬೆಳಗ್ಗೆ 9:30ಕ್ಕೆ ಮಣಿಪಾಲ ಪೆರಂಪಳ್ಳಿಯಲ್ಲಿರುವ ಭಾರತೀಯ ವಿಕಾಸ್ ಟ್ರಸ್ಟ್‌ನಲ್ಲಿ ಹಾಜರಾಗುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8217530146, 0820-2570263 ನ್ನು ಸಂಪರ್ಕಿಸುವಂತೆ ಉಡುಪಿ ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News